ಕಾವೂರು ಠಾಣೆ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ನಿಧನ

ಮಂಗಳೂರು, ಡಿ.15: ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹನುಮಂತ ಲಮಾಣಿ(38) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾದ ಇವರು ಮಂಗಳೂರಿನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದರು. ವಿಶೇಷ ಕರ್ತವ್ಯದಡಿ ಊರಿಗೆ ತೆರಳಿದ್ದರು. ಅಲ್ಲಿಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
2008ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಅವರು, ಈ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ನಾಲ್ವರು ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story