ಕಾಂಗ್ರೆಸ್ ಗೆ 136, ಬಿಜೆಪಿಗೆ 60 ರಿಂದ 70 ಸ್ಥಾನ: ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.15: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವೂ 60 ರಿಂದ 70 ಸ್ಥಾನವಷ್ಟೇ ಗೆದ್ದು ಬರಲಿದ್ದು, ಅವರಿಗೆ "ಅಪರೇಷನ್ ಕಮಲ" ಮಾಡಲು ಅವಶ್ಯಕತೆಯೇ ಇರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದ್ದಾರೆ.
ಗುರುವಾರ ಬೆಂಗಳೂರು ಪ್ರೆಸ್‍ಕ್ಲಬ್ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಸಮೀಕ್ಷೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದರೆ, ಬಿಜೆಪಿ 60ರಿಂದ 70 ಸ್ಥಾನ ಪಡೆಯಲಿದೆ. 100 ಕ್ಷೇತ್ರಗಳಲ್ಲಿ ಒಂದು ಅರ್ಜಿಗಳಿದ್ದು, ನಮ್ಮಲ್ಲಿ ಐದಾರು ಚುನಾವಣೆ ಸೋತಿರುವ ಕ್ಷೇತ್ರದಲ್ಲೂ 10 ಅರ್ಜಿಗಳು ಬಂದಿವೆ. ಇದರ ಅರ್ಥ ಏನು ಎಂದು ಹೇಳಿದರು.
ಅವರಿಗೆ ಮಾತ್ರ ಸಂಕ್ರಾಂತಿ ಬರುವುದಿಲ್ಲ, ನಮಗೂ ಸಂಕ್ರಾಂತಿ ಬರುತ್ತದೆ ಎಂದ ಅವರು, ನಿರುದ್ಯೋಗದ ವಿಚಾರದಲ್ಲಿ ಬಿಜೆಪಿ ಸರಕಾರದಿಂದ ನಮ್ಮ ಯುವಕರಿಗೆ ಅತ್ಯಂತ ಹೆಚ್ಚಿನ ಮೋಸವಾಗಿದೆ. ಪ್ರಧಾನಿ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ನೀಡಲಿಲ್ಲ. ಆದರೆ, ನಾವು ಅಧಿಕಾರಕೆಕ ಬಂದರೆ ರಾಜ್ಯದಲ್ಲಿ ಖಾಲಿ ಇರುವ ಎಲ್ಲ ಉದ್ಯೋಗಗಳನ್ನು ಭರ್ತಿ ಮಾಡುತ್ತೇವೆ ಎಂದರು.
ಭಯ ಏಕೆ?: ಜಿಲ್ಲಾ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ ಮಾಡಲು ರಾಜ್ಯ ಸರಕಾರಕ್ಕೆ ಭಯ ಯಾಕೆ? ಅಂದರೆ ರಾಜ್ಯದ ಮತದಾರರ ಮೇಲೆ ನಿಮಗೆ ನಂಬಿಕೆ ಇಲ್ಲವೇ. ಇನ್ನೂ ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಚುನಾವಣೆ ಪೈಕಿ 11 ಕಾಂಗ್ರೆಸ್, 11 ಬಿಜೆಪಿ ಗೆಲ್ಲುತ್ತದೆ. ಪದವಿಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮಂಡ್ಯ ಹಾಗೂ ಬೆಳಗಾವಿ ಮತದಾರರು ಕಾಂಗ್ರೆಸ್ ಗೆಲ್ಲಿಸಿದ್ದಾರೆ.ಹಾಗೇ, ಉಪಚುನಾವಣೆಯಲ್ಲಿ ಅವರೊಂದು ನಾವೊಂದು ಗೆಲ್ಲುತ್ತಿದ್ದೇವೆ. ಉಪಚುನಾವಣೆಯಲ್ಲಿ ಅಧಿಕಾರದಲ್ಲಿರುವವರಿಗೆ ಶಕ್ತಿ ಹೆಚ್ಚು, ಅದರೂ ನಾವು ಸಮಾನ ಸಾಧನೆ ಮಾಡಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಹಾಗೂ ಪಂಚಾಯಿತಿ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯುತ್ತಿದ್ದು, ಈ ಚುನಾವಣೆ ಏಕೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಮೊರೆ ಹೋಗಿದ್ದೇವು. ಈಗ ನ್ಯಾಯಾಲಯ ಸರಕಾರಕ್ಕೆ 5 ಲಕ್ಷ ದಂಡ ವಿಧಿಸಿದೆ. ಹೀಗಾಗಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು ಏಕೆ?: ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿದ್ದು ಹೀಗೆ...







