Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.29ರಂದು ಹೆಜಮಾಡಿಯಲ್ಲಿ ಸುರತ್ಕಲ್...

ಡಿ.29ರಂದು ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ಸಂಗ್ರಹ ಕೈಬಿಡಲು ಆಗ್ರಹಿಸಿ ಧರಣಿ

15 Dec 2022 6:39 PM IST
share
ಡಿ.29ರಂದು ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ಸಂಗ್ರಹ ಕೈಬಿಡಲು ಆಗ್ರಹಿಸಿ ಧರಣಿ

ಉಡುಪಿ, ಡಿ.15: ಸುರತ್ಕಲ್ ಅಕ್ರಮ ಟೋಲ್ ಸುಂಕವನ್ನು ಹೆಜಮಾಡಿ ಯಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶ ಜಾರಿಗೊಳ್ಳುವ ಹಿನ್ನೆಲೆ ಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಉಡುಪಿಯ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಅಜ್ಜರಕಾಡಿನ ವಿಮಾ ನೌಕರರ ಸಂಘದ ಕಚೇರಿಯಲ್ಲಿ ಸಭೆ ಸೇರಿ ಚರ್ಚಿಸಿದರು.

ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿಯಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶ ರಾಜ್ಯ ಸರಕಾರದ ಅಧಿಕೃತ ಒಪ್ಪಿಗೆಯೊಂದಿಗೆ ಪ್ರಕಟ ಗೊಂಡಿದೆ. ಹೆಜಮಾಡಿ ಟೋಲ್ ಪ್ಲಾಜಾದ ಮಾಲಕತ್ವ ಹೊಂದಿರುವ  ನವ ಯುಗ್ ಕಂಪೆನಿಯು ಸಂಗ್ರಹಕ್ಕೆ ಹಿಂದೇಟು ಹಾಕಿರುವುದರಿಂದ ತಾತ್ಕಾಲಿಕವಾಗಿ ಯಷ್ಟೆ ಹೆಜಮಾಡಿಯಲ್ಲಿ ಸಂಗ್ರಹಕ್ಕೆ ತಡೆ ಬಿದ್ದಿದೆ.

ಜಿಲ್ಲಾಡಳಿತ ಸಮಾಯಾವಕಾಶ ಕೇಳಿದ್ದರೂ ರಾಜ್ಯ ಸರಕಾರದ ಒಪ್ಪಿಗೆ ಸಿಕ್ಕಿರುವುದರಿಂದ ಯಾವುದೇ ಕ್ಷಣದಲ್ಲಿ ಸಂಗ್ರಹ ಆರಂಭಗೊಳ್ಳಬಹುದು. ಜಿಲ್ಲೆಯ ಸಂಸದ, ಶಾಸಕರುಗಳು ವಿಧಾನ ಸಭೆ ಚುನಾವಣೆಯವರಗೆ ಸಂಗ್ರಹ ಮುಂದೂಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ನಡೆಸಿದ್ದಾರೆ. ಒಟ್ಟು ಸದ್ಯದಲ್ಲೇ ಹೆಜಮಾಡಿಯಲ್ಲಿ ಹೆಚ್ಚುವರಿ ಟೋಲ್ ಸಂಗ್ರಹ ಆರಂಭ ಗೊಳ್ಳುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ಸಂಗ್ರಹದ ಆದ್ಯಾದೇಶ ಹೆದ್ದಾರಿ ಪ್ರಾಧಿಕಾರ ವಾಪಾಸು ಪಡೆಯುವುದು ಮಾತ್ರ ಶಾಶ್ವತ ಪರಿಹಾರವಾಗಿದ್ದು ಆ ನಿಟ್ಟಿನಲ್ಲಿ ಎರಡೂ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರಾಂದೋಲನ ನಡೆಸಲು,  ಡಿ.29 ರಂದು ಉಡುಪಿ ತಾಲೂಕು ಕಚೇರಿ ಮುಂಭಾಗ ಬೃಹತ್ ಸಾಮೂಹಿಕ ಧರಣಿ ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಅಧ್ಯಕ್ಷತೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಹಿಸಿದ್ದರು. ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಾಸ್ತಾವಿಕ ಮಾತನಾಡಿ ದರು. ಮಾಜಿ ಸಚಿವ ಅಭಯ ಚಂದ್ರ ಜೈನ್, ಬಸ್ ಮಾಲಕರ ಸಂಘದ ಮುಂದಾಳು ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ಎಂ.ಜಿ.ಹೆಗ್ಡೆ, ಸುಂದರ ಮಾಸ್ತರ್, ಸುರೇಶ್ ಕಲ್ಲಾಗರ, ಶೇಖರ ಹೆಜಮಾಡಿ, ರಾಲ್ಪಿ ಡಿಕೋಸ್ತ ಹೆಜಮಾಡಿ, ಶಶಿಧರ ಗೊಲ್ಲ, ಪ್ರಶಾಂತ್ ಜತ್ತನ್ನ ಮೊದ ಲಾದವರು ಉಪಸ್ಥಿತರಿದ್ದರು.

ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಂದಿಸಿದರು.

share
Next Story
X