Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಅತ್ಯಾಚಾರಿಗೆ ಶಿಕ್ಷೆ ವಿಧಿಸಿ...

ಮಂಗಳೂರು: ಅತ್ಯಾಚಾರಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

15 Dec 2022 7:10 PM IST
share
ಮಂಗಳೂರು: ಅತ್ಯಾಚಾರಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಡಿ.15: ಅಪ್ರಾಪ್ತ  ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಇಲ್ಲಿನ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪಚ್ಚನಾಡಿ ವೈದ್ಯನಾಥ ನಗರದ ನವೀನ್ ಅಲಿಯಾಸ್ ನವೀನ್ ಪೂಜಾರಿ ಅಲಿಯಾಸ್ ನವೀನ್ ಸುವರ್ಣ(42) ಶಿಕ್ಷೆಗೊಳಗಾದವನು. ಪ್ರಕರಣದಲ್ಲಿ ಇತರ ಮೂವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.

ಸಂತ್ರಸ್ತೆ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಂದೀಪ್ ಕುಲಾಲ್ ಎಂಬಾತನೊಂದಿಗೆ ಪ್ರೇಮ ಹೊಂದಿದ್ದಳು. ಅವರಿಬ್ಬರು ಜೊತೆಯಲ್ಲಿರುವುದನ್ನು ನೋಡಿದ್ದ ನವೀನ್ ಸುವರ್ಣ ಬಾಲಕಿಯ ಈ ವಿಚಾರವನ್ನು ಹೊರಗೆ ತಿಳಿಸುವುದಾಗಿ ಬ್ಲಾಕ್‌ಮೇಲ್ ಮಾಡಿದ್ದ. 16.8.2017ರಂದು ಮಧ್ಯಾಹ್ನ 2ಗಂಟೆಗೆ ಆಕೆಯನ್ನು ಬೆದರಿಸಿ ತನ್ನ ಪರಿಚಯದ ಸುಧಾ ಎಂಬವರ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ನಿರಂತರವಾಗಿ ನವೆಂಬರ್ ಕೊನೆಯ ವರೆಗೂ ಆಗಿಂದಾಗ್ಗೆ ಇದೇ ರೀತಿ ಅತ್ಯಾಚಾರ ಎಸಗಿದ್ದ.

ಇಷ್ಟೇ ಅಲ್ಲದೆ ದಾವಣಗೆರೆಯ ಹರಪನಹಳ್ಳಿ ಮಾಚಿಹಳ್ಳಿ ತಾಂಡಾ ಮೂಲದ ಹಾಗೂ ವಾಮಂಜೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಪುನೀತ್‌ ಕುಮಾರ್ ಕೂಡಾ ಬಾಲಕಿಯನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ಹೋದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಪ್ರಾಪ್ತ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು ರೇಪ್ ಆಗುವುದರಿಂದ ಸಂದೀಪ್ ಕುಲಾಲ್ ಸಹಿತ ಒಟ್ಟು ನಾಲ್ವರ ಮೇಲೆ ಪ್ರಕರಣ ದಾಖಲಾಗಿತ್ತು.

ಡಿಎನ್‌ಎ ಪರೀಕ್ಷೆ ಪಾಸಿಟಿವ್ 

ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಬಳಿಕ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಿದಾಗ ಅದು ನವೀನ್ ಸುವರ್ಣನ ಜೊತೆ ತಾಳೆಯಾಗಿದ್ದು ಆತ ಅತ್ಯಾಚಾರ ಎಸಗಿದ್ದು ದೃಢಪಟ್ಟಿತು. ಪ್ರಕರಣದ ತನಿಖೆ ಕೈಗೊಂಡಿದ್ದ ಗ್ರಾಮಾಂತರ ಇನ್‌ಸ್ಪೆಕ್ಟರ್ ಸಿದ್ದನಗೌಡ ಎಚ್.ಬಜಂತ್ರಿ ಅವರು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಒಟ್ಟಾರೆ 51 ದಾಖಲೆಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು 21 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಲಾಗಿತ್ತು.

ವಿಚಾರಣೆ ಕೈಗೊಂಡ ಹೆಚ್ಚುವರಿ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-2(ಪೋಕ್ಸೊ) ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ಐಪಿಸಿ 376 ಹಾಗೂ ಪೋಕ್ಸೊ ಕಾಯ್ದೆ ಸೆಕ್ಷನ್ 6ರಡಿ ನವೀನ್ ಸುವರ್ಣನಿಗೆ 10 ವರ್ಷ ಕಠಿಣ ಸಜೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದರು. ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಸರಕಾರದ ಪರ ಸಾರ್ವಜನಿಕ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ಅವರು ವಾದಿಸಿದ್ದರು.

share
Next Story
X