BBMP ಚುನಾವಣೆ; ಅರ್ಜಿ ವಿಚಾರಣೆ ಜ.9ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು, ಡಿ.15: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ನಡೆಯುತ್ತಿರುವುದರಿಂದಚುನಾವಣೆ ನಡೆಸಲು 3 ತಿಂಗಳ ಕಾಲಾವಕಾಶ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜ.9ಕ್ಕೆ ಮುಂದೂಡಿದೆ.
ಬಿಬಿಎಂಪಿಯ 243 ವಾರ್ಡ್‍ಗಳಿಗೆ ನ.30ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ ಡಿ.31ರೊಳಗೆ ಚುನಾವಣೆ ನಡೆಸಬೇಕು ಎಂದು 2022ರ ಸೆ.30ರಂದು ಹೈಕೋರ್ಟ್ ಆದೇಶ ನೀಡಿತ್ತು.
ಆದರೆ, ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲಾವಧಿ ವಿಸ್ತರಿಸಲು ಕೋರಿ ನಗರಾಭಿವೃದ್ಧಿ ಇಲಾಖೆ ಇತ್ತೀಚೆಗೆ ಮನವಿ ಸಲ್ಲಿಸಿದ್ದು, ಈ ಅರ್ಜಿ ಹೈಕೋರ್ಟ್ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
Next Story