Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ ಭಾರೀ ಪ್ರಮಾಣದಲ್ಲಿ ಭಾರತದ...

ಚೀನಾ ಭಾರೀ ಪ್ರಮಾಣದಲ್ಲಿ ಭಾರತದ ಜಮೀನನ್ನು ಕಬಳಿಸಿದೆ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ

15 Dec 2022 8:44 PM IST
share
ಚೀನಾ ಭಾರೀ ಪ್ರಮಾಣದಲ್ಲಿ ಭಾರತದ ಜಮೀನನ್ನು ಕಬಳಿಸಿದೆ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ

ಹೊಸದಿಲ್ಲಿ, ಡಿ. 15: ವಾಸ್ತವಿಕ ನಿಯಂತ್ರಣ ರೇಖೆ (ಎಲ್ಸಿಎ)ಯನ್ನು ಬದಲಾಯಿಸುವ ತನ್ನ ಪ್ರಯತ್ನದಲ್ಲಿ ಚೀನಾವು ಕಳೆದ ಹಲವಾರು ವರ್ಷಗಳಲ್ಲಿ ಅಗಾಧ ಯಶಸ್ಸನ್ನು ಕಂಡಿದೆ ಎಂದು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ. ಎಎನ್ಐ ಸುದ್ದಿಸಂಸ್ಥೆಯಲ್ಲಿ ಗುರುವಾರ ಪ್ರಕಟಗೊಂಡಿರುವ ಸಂದರ್ಶನವೊಂದರಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಅರುಣಾಚಲಪ್ರದೇಶ ಗಡಿಯಲ್ಲಿ ಡಿಸೆಂಬರ್ 9ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಏರ್ಪಟ್ಟ ಸಂಘರ್ಷದ ಹಿನ್ನೆಲೆಯಲ್ಲಿ ಮಾಡಲಾದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ವಿಭಾಗದಲ್ಲಿ ಭಾರತೀಯ ಭೂಭಾಗವನ್ನು ಆಕ್ರಮಿಸುವ ಮೂಲಕ ವಾಸ್ತವಿಕ ನಿಯಂತ್ರಣ ರೇಖೆಯನ್ನು ಬದಲಿಸಲು ಚೀನಾ ಸೈನಿಕರು ಪ್ರಯತ್ನಿಸಿದರು ಎಂಬುದಾಗಿ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ ನಲ್ಲಿ  ಹೇಳಿದ್ದರು. ಚೀನೀಯರ ಅತಿಕ್ರಮಣವನ್ನು ತಡೆಯಲು ಭಾರತೀಯ ಸೈನಿಕರು ಮುಂದಾದಾಗ, ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತು ಹಾಗೂ ಅವರು ಕೈ-ಕೈ ಮಿಲಾಯಿಸಿದರು ಎಂದು ಸಿಂಗ್ ಹೇಳಿದರು.

ಘರ್ಷಣೆಯಲ್ಲಿ ಎರಡೂ ಕಡೆಯ ಕೆಲವು ಸೈನಿಕರಿಗೆ ‘‘ಸಣ್ಣಪುಟ್ಟ ಗಾಯಗಳಾಗಿವೆ’’ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಚೀನಾವು ದಶಕಗಳ ಅವಧಿಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯನ್ನು ಹಂತ ಹಂತವಾಗಿ ತುಂಬಾ ಬದಲಿಸಿದೆ ಎಂದು ಸಂದರ್ಶನದಲ್ಲಿ ನರವಣೆ ಹೇಳಿದರು. ‘‘ಇದನ್ನು ಅವರು ನಿರಂತರವಾಗಿ ಸಣ್ಣ ಪ್ರಮಾಣದಲ್ಲಿ ಮಾಡುತ್ತಾ ಬಂದಿದ್ದಾರೆ. ಆಯಾಯ ಹಂತಗಳಲ್ಲಿ ಅದು ತುಂಬಾ ಅಪಾಯಕಾರಿ ಎಂಬುದಾಗಿ ಅನಿಸುತ್ತಿರಲಿಲ್ಲ’’ ಎಂದು ಮಾಜಿ ಸೇನಾ ಮುಖ್ಯಸ್ಥರು ಹೇಳಿದರು.

‘‘ಈ ಅತಿಕ್ರಮಣಗಳು ತುಂಬಾ ಅಪಾಯರಹಿತವೆಂಬಂತೆ ಕಾಣುತ್ತಿದ್ದವು. ಅವರು ಒಂದು ಸಲಕ್ಕೆ ಒಂದು ಇಂಚಿನಷ್ಟು ಅತಿಕ್ರಮಣ ನಡೆಸುತ್ತಿದ್ದರು. ಆದರೆ, ಈ ಎಲ್ಲಾ ಅತಿಕ್ರಮಣಗಳನ್ನು ಒಟ್ಟಾಗಿ ಪರಿಗಣಿಸಿದರೆ, ಹಲವು ದಶಕಗಳ ಅವಧಿಯಲ್ಲಿ ಅವರು ತುಂಬಾ ಜಮೀನನ್ನು ಒಳಗೆ ಹಾಕಿಕೊಂಡಿದ್ದಾರೆ. ಈ ತಂತ್ರಗಾರಿಕೆಯನ್ನು ಅವರು ಈಗಲೂ ಮುಂದುವರಿಸಿಕೊಂಡು ಬರುತ್ತಿದ್ದಾರೆ’’ ಎಂದು ಅವರು ಹೇಳಿದರು.

2020ರ ಜೂನ್ನಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಸೇನೆ ಅನುಭವಿಸಿದ ಸಾವು-ನೋವುಗಳು, ಅವರು ಮೊದಲ ಬಾರಿಗೆ ಅನುಭವಿಸಿದ ಹಿನ್ನಡೆಯಾಗಿತ್ತು ಎಂದು ನರವಾಣೆ ಅಭಿಪ್ರಾಯಪಟ್ಟರು. ಆ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ತನ್ನ ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ ಎಂಬುದಾಗಿ ಬಳಿಕ ಚೀನಾ ಹೇಳಿದೆ.

share
Next Story
X