ಬಸ್ ಪ್ರಯಾಣಿಕನಿಗೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ: ಶಾಹುಲ್ ಹಮೀದ್ ಕೆ.ಕೆ. ಖಂಡನೆ
ಆಸ್ಪತ್ರೆಗೆ ಭೇಟಿ ನೀಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ

ಆಸ್ಪತ್ರೆಗೆ ಭೇಟಿ ನೀಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ
ಮಂಗಳೂರು : ಬಿಸಿರೋಡ್ ನಿಂದ ಮೂಡುಬಿದಿರೆಗೆ ʼಮಹಾ ಗಣೇಶ್ʼ ಎಂಬ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂಲಾರಪಟ್ನದ ಇಸಾಕ್ ಎಂಬವರನ್ನು ಬಸ್ಸಿನಿಂದ ಎಳೆದು ಹೊರ ಹಾಕಿದ ಸಂಘ ಪರಿವಾರದ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿದ್ದು, ಘಟನೆಯನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ತಿಳಿಸಿದ್ದಾರೆ.
ಸಂತ್ರಸ್ತ ಇಸಾಕ್ ಅವರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಶಾಹುಲ್ ಹಮೀದ್ ಅವರು ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
Next Story