Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು...

ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಬೊಮ್ಮಾಯಿ

16 Dec 2022 12:56 PM IST
share
ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಬೊಮ್ಮಾಯಿ

ಬೆಂಗಳೂರು, ಡಿ.16:  ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಅವರು ಶುಕ್ರವಾರ ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಇಂದು ಉದ್ಘಾಟಿಸಿ ಮಾತನಾಡಿದರು.

ಭಾರತ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ, ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು  ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ  ವಿಜಯ ದಿವಸ ಆಚರಣೆ ಮಾಡಲಾಗುತ್ತದೆ. ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ. ಅಲ್ಲಿಗೆ ಸೇರುವ ಮುನ್ನವೇ ಎಲ್ಲಾ ತ್ಯಾಗಕ್ಕೂ ಸಿದ್ದರಾಗಿರಬೇಕು ಎಂದು ಮನಗಂಡು ಸೇರುತ್ತೇವೆ. ದೇಶದ ರಕ್ಷಣೆ ಹಾಗೂ ಅದರ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಮಾನವೀಯತೆಯ ಅತ್ಯಂತ ಶ್ರೇಷ್ಠ ಗುಣವನ್ನು ಹೊಂದಿರುವ ಸೇವೆ ಇದು ಎಂದರು.

ಮನದಾಳದ ನಮನ: ಮಾನವನ ಹೊಂದಾಣಿಕೆಯ ಗುಣ ಅತ್ಯಂತ ಶ್ರೇಷ್ಠವಾದುದು. ಪ್ರತಿಕೂಲ ವಾತಾವರಣದಲ್ಲಿಯೂ ಬದುಕಿ,  ಸೈನಿಕರು ಹೋರಾಡುತ್ತಾರೆ. ದೇಶವನ್ನು ವಿಜಯಪಥದತ್ತ ನಡೆಸಿ, ಪ್ರಾಣತ್ಯಾಗ ಮಾಡಿದ ಹಾಗೂ ಗಾಯಗೊಂಡ ಎಲ್ಲ  ಯೋಧರಿಗೂ ಮನದಾಳದ ನಮನ ಸಲ್ಲಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಅವರ ಅಪ್ರತಿಮ ತ್ಯಾಗ ದೇಶಕ್ಕೆ ವಿಜಯ ತಂದು ಸುರಕ್ಷಿತವಾಗಿ ಇಟ್ಟಿದೆ. ಸಾಮಾನ್ಯ ನಾಗರಿಕರು ಶಾಂತಿಯಿಂದಿರಲು ಸಾಧ್ಯವಾಗಿದೆ ಎಂದರು.

ಸನ್ನದ್ಧತೆ: ಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ಬೇಡುವ ರಕ್ಷಣಾ ಪಡೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು ಎಂದರು.

ನಾಯಕತ್ವ: ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲ. ಆದರೂ ಸಾಹಸವನ್ನು ಮಾಡುತ್ತಿರುತ್ತಾರೆ. ಕೆಲವು ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಚು ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕಿದೆ ಎಂದರು.

ರಕ್ಷಣಾ ಪಡೆಗಳಿಂದಾಗಿ  ನಮ್ಮ ದೇಶ ಸುರಕ್ಷಿತವಾಗಿದ್ದು, ನಾವು ಪ್ರಗತಿಯತ್ತ  ಸಾಗಬೇಕು. ನಾಗರಿಕರಾಗಿ ದೇಶವಾಸಿಗಳಿಗೆ ಉತ್ತಮ ಜೀವನ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ ಶಶಿಧರ್, ಉಪಸ್ಥಿತರಿದ್ದರು

share
Next Story
X