ಬಂಟ್ವಾಳ: ಕಾರು-ದ್ವಿಚಕ್ರ ವಾಹನ ನಡುವೆ ಅಪಘಾತ; ಸವಾರನಿಗೆ ಗಂಭೀರ ಗಾಯ

ಬಂಟ್ವಾಳ, ಡಿ.16: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಪುತ್ತೂರು ಸಮೀಪದ ಕುಂಡಡ್ಕ ನಿವಾಸಿ ಕಿರಣ್ ಗಾಯಗೊಂಡ ಯುವಕ. ಪುತ್ತೂರಿನಿಂದ ಮಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕೊಡಾಜೆ ಎಂಬಲ್ಲಿ ಎದುರಿನಿಂದ ಅತೀ ವೇಗದಿಂದ ಬಂದ ಕಾರು ನೇರವಾಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಕಾರು ಕೂಡ ರಸ್ತೆಯ ಪಕ್ಕಕ್ಕೆ ಸರಿದು ಗುಂಡಿಗೆ ವಾಲಿ ನಿಂತಿದೆ. ಘಟನೆಯಿಂದ ದ್ವಿಚಕ್ರ ವಾಹನ ಸವಾರ ಕಿರಣ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಈತನನ್ನು ರಿಕ್ಷಾದಲ್ಲಿ ಮಾಣಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ 108 ಅಂಬ್ಯುಲೆನ್ಸ್ ವಾಹನದ ಮೂಲಕ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Next Story





