Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಂಕ್ರಾಮಿಕ ರೋಗಗಳ ಬಗ್ಗೆ ಜನತೆಗೆ ಅರಿವು...

ಸಾಂಕ್ರಾಮಿಕ ರೋಗಗಳ ಬಗ್ಗೆ ಜನತೆಗೆ ಅರಿವು ಮೂಡಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

16 Dec 2022 7:19 PM IST
share
ಸಾಂಕ್ರಾಮಿಕ ರೋಗಗಳ ಬಗ್ಗೆ ಜನತೆಗೆ ಅರಿವು ಮೂಡಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ, ಡಿ.16: ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆಗಿಂದಾಗ್ಗೆ ಅರಿವು ಮೂಡಿಸಿದ್ದಲ್ಲಿ ಮಾತ್ರ ಜನರನ್ನು ರೋಗಗಳಿಂದ ದೂರ ಉಳಿಸಲು ಸಾಧ್ಯ. ಈ ಬಗ್ಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಸಾಮಾನ್ಯವಾಗಿ ರೋಗ ರುಜಿನಗಳು ಹವಾಮಾನಕ್ಕೆ ಅನುಗುಣವಾಗಿ ಹರಡುತ್ತವೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ವರ್ಷದ ಮೊದಲನೇ ಮಾಸದಿಂದ ಕೊನೆಯ ಮಾಸದವರೆಗೆ ಮುನ್ನೆಚ್ಚರಿಕೆ ಕ್ರಮಗಳು ಸೇರಿದಂತೆ ಇತರ ಕಾರ್ಯಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಿ, ಅನುಷ್ಠಾನ ಗೊಳಿಸಿದ್ದಲ್ಲಿ ಮಾತ್ರ ಸಮಾಜ ಆರೋಗ್ಯಪೂರ್ಣ ವಾಗಿರಲು ಸಾಧ್ಯ ಎಂದರು. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಕಡಿತಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್‌ಗಳು, ಆರೋಗ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಅವುಗಳನ್ನು ನಿಯಂತ್ರಿಸಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತಗ್ರಾಮವಾಗಿ ಘೋಷಿಸಲಾಗಿದೆ. ಇದರಿಂದ ಅಲ್ಲಿನ ಸ್ಥಳೀಯ ಜನರಿಗೆ ಆಗಿರುವ ಲಾಭಗಳನ್ನು ಇತರೆ ಗ್ರಾಮದವರಿಗೆ ತಿಳಿಸಿ, ಅವರುಗಳು ತಂಬಾಕು ಉತ್ಪನ್ನಗಳಿಂದ ದೂರ ಇರುವ ಹಾಗೆ ಉತ್ತೇಜಿಸುವ ಕೆಲಸವಾಗಬೇಕು ಎಂದ ಜಿಲ್ಲಾಧಿಕಾರಿ, ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮವನ್ನು ಸಹ ತಂಬಾಕು ಮುಕ್ತವನ್ನಾಗಿ ಘೋಷಿಸಲು ಇರುವ ಎಲ್ಲಾ ಅರ್ಹತೆಗಳನ್ನು ಹೊಂದಿದೆ. ಸರಕಾರದ ಮಾನದಂಡದಂತೆ ಇದ್ದಲ್ಲಿ ಈ ಗ್ರಾಮವನ್ನೂ ತಂಬಾಕು ಮುಕ್ತ ಗ್ರಾಮವನ್ನಾಗಿಸಬೇಕು ಎಂದರು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಶೇ.೧೦೦ರಷ್ಟು ನಿಯಂತ್ರಿಸಲು ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು, ತಂಬಾಕು ಉತ್ಪನ್ನಗಳಿಂದ ದೂರವಿದ್ದಲ್ಲಿ ದೇಹಾರೋಗ್ಯವು ಮಾರಕ ರೋಗಗಳಿಂದ ದೂರ ಉಳಿಯಲು ಸಾಧ್ಯ ಎಂಬುದನ್ನು ಯುವಜನರಲ್ಲಿ ಮನದಟ್ಟು ಮಾಡಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
share
Next Story
X