ಯುವಕ ಕಾಣೆ

ಮಂಗಳೂರು, ಡಿ.16: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶಭವನದ ಆನಂದ ನಗರದ ನಾಗರಾಜ ಎಂಬವರ ಪುತ್ರ ಹಿತೇಶ್ (21) ಗುರುವಾರ ಬೆಳಗ್ಗೆ 9 ಗಂಟೆಗೆ ಕಾಣೆಯಾಗಿದ್ದಾರೆ. ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಿತೇಶ್ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಕಪ್ಪು ಬಣ್ಣದ ಶಾಲು ಹಾಕಿದ್ದಾರೆ. ೫.೪ ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ನೀಲಿ ಬಣ್ಣದ ಜೀನ್ಸ್ ಮತ್ತು ಮೆರೂನ್ ಬಣ್ಣದ ಟಿ-ಶರ್ಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿಯಿದ್ದಲ್ಲಿ ಕಾವೂರು ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





