Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ವಿರುದ್ಧ ಟೀಕೆಯಿಂದ ಪಾಕ್ ಸಚಿವ...

ಮೋದಿ ವಿರುದ್ಧ ಟೀಕೆಯಿಂದ ಪಾಕ್ ಸಚಿವ ಬಿಲಾವಲ್ ಕೀಳು ಮನೋಸ್ಥಿತಿ ಬಯಲು: ಯಡಿಯೂರಪ್ಪ

17 Dec 2022 11:19 AM IST
share
ಮೋದಿ ವಿರುದ್ಧ ಟೀಕೆಯಿಂದ ಪಾಕ್ ಸಚಿವ ಬಿಲಾವಲ್ ಕೀಳು ಮನೋಸ್ಥಿತಿ ಬಯಲು: ಯಡಿಯೂರಪ್ಪ

ಬೆಂಗಳೂರು, ಡಿ.17: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕುರಿತಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಝರ್ದಾರಿ ಮಾಡಿರುವ ಟೀಕೆ ಅವರ ಕೀಳು ಮನೋಸ್ಥಿತಿಯನ್ನು ಬಯಲು ಮಾಡಿದೆ. ಪಾಕಿಸ್ಥಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ಥಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

 ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸುವಂತಾಗಲು ಭಾರತದ ಪ್ರಧಾನ ಮಂತ್ರಿಯವರು ನೇತೃತ್ವ ವಹಿಸಬೇಕೆಂದು ವಿಶ್ವದ ಎಲ್ಲಾ ಪ್ರಮುಖ ದೇಶಗಳು ಕೋರುತ್ತಿರುವ ಇಂತಹ ಸಂದರ್ಭದಲ್ಲಿ ಪಾಕಿಸ್ಥಾನದ ವಿದೇಶಾಂಗ ಸಚಿವರಿಂದ ಇಂತಹ ಹೇಳಿಕೆ ನಾಯಿಬಾಲ ಡೊಂಕು ಎಂಬಂತಹ ಪ್ರವೃತ್ತಿಯನ್ನು ಸಾಬೀತು ಪಡಿಸುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ವಿಶ್ವದ ಅತ್ಯುಗ್ರ ಒಸಾಮ ಬಿನ್‌ ಲಾಡೆನ್‌ ಎಲ್ಲಿ ಅಡಗಿ ಕುಳಿತಿದ್ದ, ಮತ್ತು ಅವನನ್ನು ಪೋಷಿಸುತ್ತಿದ್ದವರು ಯಾರು ಹಾಗೂ ವಿಶ್ವದ ಬಹುತೇಕ ಉಗ್ರ ಸಂಘಟನೆಗಳಿಗೆ ತವರು ನೆಲೆ ಪಾಕಿಸ್ಥಾನ ಎಂದು ಇಡೀ ಜಗತ್ತಿಗೆ ತಿಳಿದಿರುವಾಗ ನರೆಂದ್ರ ಮೋದಿಯಂತಹ ವಿಶ್ವ ನಾಯಕರ ಬಗ್ಗೆ ಟೀಕೆ ಮಾಡಿದರೆ ಜಗತ್ತಿನ ಕಣ್ಣಿನಲ್ಲಿ ತಾನು ದೊಡ್ಡ ವ್ಯಕ್ತಿಯಾಗುತ್ತೇನೆಂದು ಭಾವಿಸಿರುವಂತೆ ಕಾಣುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

2018ರ ಫೆಬ್ರವರಿ 18ರಂದು ಅಮೆರಿಕದ ವಾಷಿಂಗ್ಟನ್‌ ನಲ್ಲಿ “ಪಾಕಿಸ್ಥಾನದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ”ಎಂದು ಹಾಗೂ 2019ರ  ಮಾರ್ಚ್‌ 7ರಂದು “ಪಾಕಿಸ್ಥಾನದ ಮೂರು ಸಚಿವರು ಉಗ್ರ ಸಂಘಟನೆಗಳ ಜೊತೆಗೆ ಸಂಬಂದ ಹೊಂದಿದ್ದಾರೆ”ಎಂದು ಹೇಳಿಕೆ ನೀಡಿರುವುದನ್ನು ಮರೆತಂತೆ ಕಾಣುತ್ತಿದೆ. ನರೆಂದ್ರ ಮೋದಿಯವರ ಕುರಿತಾದ ಕೀಳು ಮಟ್ಟದ ಇಬ್ಬಗೆತನದ ಅವರ ಹೇಳಿಕೆ ಭಾರತ ದೇಶಕ್ಕೆ ಮಾಡಿದ ಅವಮಾನ, ದೇಶಪ್ರೇಮಿ ಭಾರತೀಯರು ಇದನ್ನು ಖಂಡಿಸಿ ಇದರ ವಿರುದ್ದ ಹೋರಾಟ ಮಾಡಬೇಕಿದೆ ಎಂದು ಯಡಿಯೂರಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
Next Story
X