ತುರುವೇಕೆರೆ | ರಸ್ತೆ ಅಪಘಾತಕ್ಕೆ ಬಾಲಕಿ ಸಹಿತ ಇಬ್ಬರು ಬಲಿ; ಮಹಿಳೆ ಗಂಭೀರ
ತುಮಕೂರು, ಡಿ.17: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ(Accident) ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸಹಿತ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.
ದ್ವಿಚಕ್ರ ವಾಹನ ಸವಾರ ನಿಂಗಪ್ಪ(65) ಹಾಗೂ ಜೊತೆಗಿದ್ದ 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಳೆದ ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ನಿಂಗಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೆ, ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆಯನ್ನು ತುರುವೇಕೆರೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ತುರುವೆಕೇರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story