ಬಿ.ಸಿ.ರೋಡ್ | ಖಾಸಗಿ ಬಸ್ ಗಳ ಮುಖಾಮುಖಿ ಢಿಕ್ಕಿ: 8 ಮಂದಿಗೆ ಗಾಯ

ಬಂಟ್ವಾಳ, ಡಿ.17: ಎರಡು ಖಾಸಗಿ ಬಸ್ ಗಳು ಮುಖಾಮುಖಿ ಢಿಕ್ಕಿಯಾಗಿ (Accident) ಚಾಲಕ ಸೇರಿದಂತೆ ಒಟ್ಟು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜಿಪ ರೂಟ್ ನ ಶಾರದಾ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಕೂಡಾ ಬಸ್ಸಿಗೆ ಢಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು.
ಇದನ್ನೂ ಓದಿ: ತುರುವೇಕೆರೆ | ರಸ್ತೆ ಅಪಘಾತಕ್ಕೆ ಬಾಲಕಿ ಸಹಿತ ಇಬ್ಬರು ಬಲಿ; ಮಹಿಳೆ ಗಂಭೀರ
Next Story