Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಸಿಯುತ್ತಿರುವ ಮಾನವೀಯ ಮೌಲ್ಯವನ್ನು...

ಕುಸಿಯುತ್ತಿರುವ ಮಾನವೀಯ ಮೌಲ್ಯವನ್ನು ಮತ್ತೆ ಕಟ್ಟುವುದು ಇಂದಿನ ಅಗತ್ಯ: ನ್ಯಾ.ಸಂತೋಷ್ ಹೆಗ್ಡೆ

ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ‘ವಿಕಾಸ-22’

17 Dec 2022 7:01 PM IST
share
ಕುಸಿಯುತ್ತಿರುವ ಮಾನವೀಯ ಮೌಲ್ಯವನ್ನು ಮತ್ತೆ ಕಟ್ಟುವುದು ಇಂದಿನ ಅಗತ್ಯ: ನ್ಯಾ.ಸಂತೋಷ್ ಹೆಗ್ಡೆ
ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ‘ವಿಕಾಸ-22’

ಕುಂದಾಪುರ, ಡಿ.17: ಸಮಾಜದಲ್ಲಿ ಇಂದು ನಡೆಯುತ್ತಿರುವ ಅನ್ಯಾಯಗಳಿಗೆ ಸಮಾಜ ಕೂಡ ಕಾರಣವಾಗಿದೆ. ಮೊದಲಿನಂತೆ ಒಳ್ಳೆಯವರನ್ನು ಗುರುತಿಸುವ ಬದಲು ಶ್ರೀಮಂತಿಕೆ, ಅಧಿಕಾರದ ಹಿಂದೆ ಹೋಗುತ್ತಿದ್ದೇವೆ. ಹಿರಿಯರು ಕಟ್ಟಿಕೊಟ್ಟ ಮಾನವೀಯ ಮೌಲ್ಯಗಳು ಇಂದು ಕುಸಿಯುತ್ತಿದ್ದು ಮತ್ತೆ ಅದನ್ನು ಕಟ್ಟುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಲೋಕಾಯುಕ್ತ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಕುಂದಾಪುರ ಕೋಡಿ ಬೀಚ್ ರಸ್ತೆಯಲ್ಲಿರುವ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಶನಿವಾರ ನಡೆದ ಬ್ಯಾರೀಸ್ ಸಮೂಹ ಸಂಸ್ಥೆಗಳ 116ನೇ ವರ್ಷದ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವ ಸಮಾರಂಭ ‘ವಿಕಾಸ -22’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಕೆಟ್ಟದ್ದನ್ನು ಕೆಟ್ಟದ್ದು ಎಂದರೆ ಸಮಾಜ ಒಪ್ಪುತ್ತಿಲ್ಲ. ಇದರಿಂದ ಶಾಂತಿ, ಸೌಹಾರ್ದತೆ ಉಳಿಯುತ್ತಿಲ್ಲ. ತೃಪ್ತಿ ಹಾಗೂ ಮಾನವೀಯತೆ ಬೆಳೆಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಜಿವನ ಪಥದಲ್ಲಿ ಮಾನವೀಯತೆ ಬೆಳೆಸಿಕೊಂಡು ಮಾನವನಾಗಿ ಬದುಕುವುದು ಸಾರ್ಥಕವಾಗುತ್ತದೆ ಎಂದರು.

ಸರಕಾರಿ ಹುದ್ದೆಗಾಗಿ ಪೈಪೋಟಿ ಎಂದಿಗೂ ಒಳಿತಲ್ಲ. ಇಂದು ಇರುವವರು ಹಾಗೂ ಇಲ್ಲದವರ ನಡುವೆ ಅಂತರ ಹೆಚ್ಚಿದ್ದು ತಿಕ್ಕಾಟ ಜಾಸ್ತಿಯಾಗಿದೆ. ದುರಾಸೆ ಅತಿಯಾಗಿದ್ದು ಈ ರೋಗಕ್ಕೆ ತೃಪ್ತಿ ಹೊಂದುವುದೇ ಮದ್ದು ಆಗಿದೆ. ತೃಪ್ತಿಯಿದ್ದರೆ ದುರಾಸೆ ಇರಲ್ಲ. ಮನುಷ್ಯನಲ್ಲಿ ಆಕಾಂಕ್ಷೆ ಇರಬೇಕೆ ಹೊರತು ಮತ್ತೊಬ್ಬರ ಜೇಬಿಗೆ ಕೈ ಹಾಕುವುದು, ಹೊಟ್ಟೆ ಮೇಲೆ ಹೊಡೆಯುವುದು ಮಾಡಬಾರದು. ಮಕ್ಕಳಿಗೆ ನೀತಿ ಪಾಠ ಹೇಳುವ ಗುಣವನ್ನು ಪೋಷಕರು ಬೆಳೆಸಿಕೊಳ್ಳಬೇಕು. ಇಂದಿನ ಶಿಕ್ಷಣದಲ್ಲಿ ಮೌಲ್ಯ ಹಾಗೂ ನೈತಿಕತೆ ಕಲಿಸುವ ಕಾರ್ಯವಾಗಬೇಕು ಎಂದು ಅವರು ತಿಳಿಸಿದರು.

ಕರಾವಳಿ ಕಾವಲು ಪಡೆ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಮಾತನಾಡಿ, ಕ್ರೀಡೆಯಿಂದ ದೈಹಿಕ ಸದೃಢತೆ ಸೇರಿದಂತೆ ಹಲವು ಪ್ರಯೋಜನಗಳಿವೆ. ಆದರ್ಶಗಳನ್ನು ಪೋಷಕರು ಬೆಳೆಸಿಕೊಂಡರೆ ಮಕ್ಕಳು ಅದನ್ನು ಪಾಲಿಸುತ್ತಾರೆ. ಕಲಿಕೆಯ ಕಡೆಗೆ ದೃಷ್ಟಿಯಿದ್ದರೆ ಎಲ್ಲವನ್ನು ಕಲಿಯಲು ಸಾಧ್ಯ. ಭಾರತದಲ್ಲಿನ ವಿವಿಧ ಜಾತಿ, ಧರ್ಮಗಳ ಚಿಂತನೆ ತಿಳಿಯಬೇಕು ಎಂದರು.

ಭಾರತೀಯರು ಎಲ್ಲದರಲ್ಲೂ ದೇವರನ್ನು ಕಾಣುತ್ತಾರೆ. ಪರಿಸರ ಕಾಳಜಿ, ಜನರ ಬಗ್ಗೆ ಪ್ರೀತಿ, ಅನುಕಂಪ ಬೆಳೆದಾಗ ವ್ಯಕ್ತಿ ಸಾಧನೆ ಶಿಖರದತ್ತ ಏರಬಹುದು. ಅಂತೆಯೇ ಜೀವನಶೈಲಿ ಇತರರಿಗೆ ಮಾದರಿಯಾಗಿ, ಉದಾಹರಣೆಯಾಗುವಂತೆ ಬದುಕುತ್ತಿರುವರಲ್ಲಿ ಬ್ಯಾರೀಸ್ ಸಂಸ್ಥೆಯನ್ನು ಕಟ್ಟಿ ಬೆಳೆಸುತ್ತಿರುವವರು ಪ್ರಮುಖರು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ ಅಬ್ದುಲ್ ರಹ್ಮಾನ್ ವಹಿಸಿದ್ದರು. ಗಣಕ ಯಂತ್ರದಲ್ಲಿ ಭಾರತೀಯ ಭಾಷೆಗಳ ತಂತ್ರಾಂಶವನ್ನು ಪರಿಚಯಿಸಿದ ನಿವೃತ್ತ ಪ್ರಾಧ್ಯಾಪಕ ವಿಜ್ಞಾನಿ ನಾಡೋಜ ಕೆ.ಪಿ ರಾವ್ ಮತ್ತು ಅಂತರಾಷ್ಟ್ರೀಯ ಕ್ರಿಕೆಟರ್ ಪೃಥ್ವಿರಾಜ್ ಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಆಟೋಟ ಹಾಗೂ ಶೈಕ್ಷಣಿಕವಾಗಿ ಸಾಧನೆ ಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಹಾಜಿ ಕೆ.ಮೊಯ್ದಿನ್ ಬ್ಯಾರಿ ಎಜ್ಯುಕೇಶನ್ ಟ್ರಸ್ಟ್ ಮುಖ್ಯಸ್ಥ ಸೈಯದ್ ಮಹಮ್ಮದ್ ಬ್ಯಾರಿ, ಬಿ.ಎಡ್ ವಿಭಾಗದ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್., ಸಂಸ್ಥೆಯ ಸಲಹೆಗಾರ ಅಬ್ಬು ಶೇಖ್ ಸಾಹೇಬ್, ಹಾಜಿ ಕೆ. ಮೊಯ್ದಿನ್ ಬ್ಯಾರಿ ಮೆಮೊರಿಯಲ್ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯ ಜಟ್ಟಪ್ಪ, ಬೀಬಿ ಫಾತಿಮಾ ಮೆಮೋರಿಯಲ್ ಅಂಗನವಾಡಿಯ ಸುಮಿತ್ರಾ ಮೊದಲಾದವರು ಉಪಸ್ಥಿತರಿದ್ದರು.

ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯಿನಿ ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಹಯವದನ ಉಪಾಧ್ಯ ಮತ್ತು ಕನ್ನಡ ಪ್ರಾಧ್ಯಾಪಕ ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಿ.ಎಡ್. ವಿಭಾಗದ ಪ್ರಾಂಶುಪಾಲೆ ಡಾ.ಫಿರ್ದೋಸ್ ಮತ್ತು ಹಾಜಿ ಕೆ. ಮೊಯ್ದಿನ್ ಬ್ಯಾರಿ ಮೆಮೊರಿಯಲ್ ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಯಶೀಲ ಶೆಟ್ಟಿ ವಾರ್ಷಿಕ ವರದಿ ಮಂಡಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ವಿನುತಾ ಬಹುಮಾನಿತರ ಪಟ್ಟಿ ವಾಚಿಸಿದರು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಶಮೀರ್ ವಂದಿಸಿದರು.

ಪ್ಲಾಸ್ಟಿಕ್ ಮುಕ್ತ ಕರಾವಳಿ ಅಭಿಯಾನ

ಕರಾವಳಿ ಕಾವಲು ಪಡೆಯಿಂದ ನಡೆಯಲಿರುವ ಪ್ಲಾಸ್ಟಿಕ್ ಮುಕ್ತ ಕರಾವಳಿ ತೀರ ಅಭಿಯಾನದ ಬಗ್ಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಕರಾವಳಿ ಕಾವಲು ಪಡೆ ಎಸ್ಪಿ ಅಬ್ದುಲ್ ಅಹದ್ ಮಾಹಿತಿ ಪತ್ರ ನೀಡಿದರು.

‘ಕರಾವಳಿ ಸಮುದ್ರ ತೀರ ಭಾಗವನ್ನು ತ್ಯಾಜ್ಯ ಮುಕ್ತ ಮಾಡಲು ಕರಾವಳಿ ಕಾವಲು ಪಡೆಯು ಸಂಘ ಸಂಸ್ಥೆ, ವಿದ್ಯಾಸಂಸ್ಥೆಗಳ ಸಹಕಾರದಲ್ಲಿ ಹೊಸ ವರ್ಷದಿಂದ ಆರಂಭಿಸಿ ವರ್ಷ ಕಾಲ ವಿಶೇಷ ಅಭಿಯಾನ ರೂಪಿಸಿದೆ. ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಮುಕ್ತ ವ್ಯವಸ್ಥೆ ಪರಿಕಲ್ಪನೆ ಹೆಚ್ಚಬೇಕು. ಬ್ಯಾರೀಸ್ ಸಮೂಹ ಸಂಸ್ಥೆಗಳು ಈ ಕಾಯಕದಲ್ಲಿ ಈಗಾಗಾಲೇ ತೊಡಗಿಸಿಕೊಂಡಿದ್ದರಿಂದ ಕುಂದಾಪುರದ ಕೋಡಿ ಬೀಚ್ ಪರಿಸರ ಸ್ವಚ್ಚವಾಗಿದೆ ಎಂದು ಅಬ್ದುಲ್ ಅಹದ್ ಹೇಳಿದರು.

ಈ ಸಂದರ್ಭದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ ಅಬ್ದುಲ್ ರಹ್ಮಾನ್, ಹಾಜಿ ಕೆ. ಮೊಯ್ದಿನ್ ಬ್ಯಾರಿ ಎಜ್ಯುಕೇಶನ್ ಟ್ರಸ್ಟ್ ಮುಖ್ಯಸ್ಥ ಸೈಯದ್ ಮಹಮ್ಮದ್ ಬ್ಯಾರಿ, ಕರಾವಳಿ ಕಾವಲು ಪಡೆ ಅಧಿಕಾರಿಗಳಿದ್ದರು.

share
Next Story
X