ವಿಶೇಷ ಸಂಗೀತ ನೃತ್ಯ, ತಾಳವಾದ್ಯ ಲಿಖಿತ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 18ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ವಿಶೇಷ ಸಂಗೀತ ನೃತ್ಯ, ತಾಳವಾದ್ಯ ಲಿಖಿತ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೪೪(೧) ರಂತೆ ನಿಷೇಧಾಜ್ಞೆ ಜಾರಿ ಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story