ಪ್ರವಾಸಿಗರನ್ನು ಆಕರ್ಷಿಸಲು ಬೀಚ್ ಉತ್ಸವ: ಶಾಸಕ ಲಾಲಾಜಿ ಮೆಂಡನ್
ಕಾಪುವಿನಲ್ಲಿ ಬೀಚ್ ಫೆಸ್ಟ್ 2022

ಕಾಪು : ರಾಜ್ಯದ ಕರಾವಳಿ ತೀರದ ಸಮುದ್ರ ತೀರಗಳು ಪ್ರವಾಸೋಧ್ಯಮಕ್ಕೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಬೀಚ್ ಉತ್ಸವವನ್ನು ನಡೆಸಲಾಗಿದೆ ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್, ಕಾಪು ಪಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕಾಪು ಬೀಚ್‍ನಲ್ಲಿ ಎರಡು ದಿನಗಳ ಕಾಲ ನಡೆಯುವ ಕಡಲ ಐಸಿರ ಬೀಚ್ ಫೆಸ್ಟ್-2022 ದಲ್ಲಿ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.
ಉದ್ಯಮಿ ಗಂಗಾಧರ ಸುವರ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಿಲ್ಪಾ ಜಿ.ಸುವರ್ಣ, ಪುರಸಭಾ ಸದಸ್ಯ ಅನಿಲ್ ಕುಮಾರ್, ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್‍ನ ಅಧ್ಯಕ್ಷ ಶೀಲರಾಜ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಸಚಿನ್ ಪುತ್ರನ್, ಕೋಶಾಧಿಕಾರಿ ಕುಶ ಸಾಲ್ಯಾನ್, ಉಪಾಧ್ಯಕ್ಷ ಆನಂದ್ ಶ್ರೀಯಾನ್ ಉಪಸ್ಥಿತರಿದ್ದರು.
ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ, 1 ರಿಂದ 4ನೇ ತರಗತಿ, 5ರಿಂದ 7, 8ರಿಂದ 10ನೇ ತರಗತಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಶೀರ್ಷಿಕೆಯಡಿ ಚಿತ್ರ ಬಿಡಿಸುವ ಸ್ವರ್ಧೆ, ತ್ರೋಬಾಲ್ ಪಂದ್ಯಾಟ ನಡೆಯಿತು.
ಸಾರ್ವಜನಿಕರಿಗೆ ಬಲೆ ಬೀಸಿ, ಗಾಳ ಹಾಕಿ ಮೀನು ಹಿಡಿಯುವುದು, ಮಹಿಳೆಯರಿಗಾಗಿ ಸಂಗೀತ ಕುರ್ಚಿ, ಬಾಳೆ ಹಣ್ಣು ತಿನ್ನುವ ಸ್ಪರ್ಧೆ, ಬಾಟಲ್ ಬ್ಯಾಲೆನ್ಸ್ ಸ್ಪರ್ಧೆ ಸಾರ್ವಜನಿಕರನ್ನು ಆಕರ್ಷಿಸಿತು.








