ಪಾಕ್ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.ದೇಶ ವಿರೋಧಿ ಕಾಂಗ್ರೆಸ್ ಮತ್ತು ಭಯೋತ್ಪಾದಕ ರಾಷ್ಟ್ರ ಪಾಕ್ ವಿರುದ್ಧ ಘೋಷಣೆ ಮೊಳಗಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಗೀತಾಂಜಲಿ ಎಂ. ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಸತ್ಯಾನಂದ ನಾಯಕ್, ನಳಿನಿ ಪ್ರದೀಪ್ ರಾವ್, ಸದಾನಂದ ಬಳ್ಕೂರು, ಗುರುಪ್ರಸಾದ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ವೀಣಾ ಎಸ್. ಶೆಟ್ಟಿ, ಸುರೇಂದ್ರ ಪಣಿಯೂರು ಹಾಗೂ ಇತರರು ಉಪಸ್ಥಿತರಿದ್ದರು.





