VIDEO ವೈರಲ್ | ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ ಮಂಡ್ಯ ಬಿಜೆಪಿ ಕಾರ್ಯಕರ್ತರು !
![VIDEO ವೈರಲ್ | ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ ಮಂಡ್ಯ ಬಿಜೆಪಿ ಕಾರ್ಯಕರ್ತರು ! VIDEO ವೈರಲ್ | ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ ಮಂಡ್ಯ ಬಿಜೆಪಿ ಕಾರ್ಯಕರ್ತರು !](https://www.varthabharati.in/sites/default/files/images/articles/2022/12/18/360510-1671301848.jpg)
ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಯುವ ಮೋರ್ಚಾ ನಡೆಸಿದ ಪ್ರತಿಭಟನೆಯೊಂದರಲ್ಲಿ ಪಾಕ್ ಪರ ಘೋಷಣೆ ಮೊಳಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ''ಝಿಂದಾಬಾದ್ ಝಿಂದಾಬಾದ್'' ಎಂದಾಗ 'ಪಾಕಿಸ್ತಾನ್ ಝಿಂದಾಬಾದ್' ಎಂದು ಇಬ್ಬರು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ತಕ್ಷಣ ಅಕ್ಕಪಕ್ಕದಲ್ಲಿದ್ದ ಕಾರ್ಯಕರ್ತರು 'ಪಾಕಿಸ್ತಾನ ಝಿಂದಾಬಾದ್' ಘೋಷಣೆ ಕೂಗುತ್ತಿದ್ದವರ ಬಾಯಿ ಮುಚ್ಚಿಸಿದ್ದು, ವಿಡಿಯೋದಲ್ಲಿ ದಾಖಲಾಗಿದೆ.
Next Story