ಆಗುಂಬೆ: ಚಿತ್ರದುರ್ಗ ಮೂಲದ ಮಹಿಳೆಯ ಹತ್ಯೆ; ಓರ್ವ ವಶಕ್ಕೆ
ಶಿವಮೊಗ್ಗ, ಡಿ.18: ತೋಟದ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ರವಿವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆನ್ನಲಾಗಿದೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story