ಮೈಸೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಮೈಸೂರು,ಡಿ.18: ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.
ಹೊರಹೋಗಿದ್ದ ಮನೆಯವರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಸಮೀಪದ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದರೂ, ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.
ಗಿರಿಜಾಲಕ್ಷ್ಮಿ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಗಿರಿಜಾ ಮೃತದೇಹಕೆ.ಆರ್.ಆಸ್ಪತ್ರೆಯಲ್ಲಿ ಇದ್ದು, ನಾಳೆ (ಸೋಮವಾರ) ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಕರಣ ಕುರಿತು ನಝರ್ ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಐದು ದಿನಗಳ ಹಿಂದಷ್ಟೇ ಗೋಪಿನಾಥ್ ಅವರ ಸಹೋದರ ಮೃತಪಟ್ಟಿದ್ದಾರೆನ್ನಲಾಗಿದೆ.