Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತವಾಂಗ್ ಘರ್ಷಣೆಗಳ ಬಳಿಕ ಈಶಾನ್ಯವನ್ನು...

ತವಾಂಗ್ ಘರ್ಷಣೆಗಳ ಬಳಿಕ ಈಶಾನ್ಯವನ್ನು ಗುರಿಯಾಗಿಸಿ ಡ್ರೋನ್‌ಗಳು,ಯುದ್ಧವಿಮಾನಗಳನ್ನು ನಿಯೋಜಿಸಿದ್ದ ಚೀನಾ : ವರದಿ

19 Dec 2022 9:53 PM IST
share
ತವಾಂಗ್ ಘರ್ಷಣೆಗಳ ಬಳಿಕ ಈಶಾನ್ಯವನ್ನು ಗುರಿಯಾಗಿಸಿ ಡ್ರೋನ್‌ಗಳು,ಯುದ್ಧವಿಮಾನಗಳನ್ನು ನಿಯೋಜಿಸಿದ್ದ ಚೀನಾ : ವರದಿ

ಹೊಸದಿಲ್ಲಿ,ಡಿ.19: ಅರುಣಾಚಲ ಪ್ರದೇಶದಲ್ಲಿ ಭಾರತ-ಚೀನಾ(India- China) ಪಡೆಗಳ ನಡುವೆ ಘರ್ಷಣೆಗಳ ಬಳಿಕ ಆಂಗ್ಲ ಸುದ್ದಿವಾಹಿನಿಯೊಂದಕ್ಕೆ ಲಭ್ಯವಾಗಿರುವ ಹೈ-ರೆಸೊಲ್ಯೂಷನ್ (High-resolution)ಉಪಗ್ರಹ ಚಿತ್ರಗಳು ಚೀನಾ ಟಿಬೆಟ್‌ನ ಪ್ರಮುಖ ವಾಯುನೆಲೆಗಳಲ್ಲಿ ಈಶಾನ್ಯ ಭಾರತವನ್ನು ಗುರಿಯಾಗಿಸಿಕೊಂಡು ಭಾರೀ ಸಂಖ್ಯೆಯಲ್ಲಿ ಡ್ರೋನ್‌ಗಳು ಮತ್ತು ಯುದ್ಧವಿಮಾನಗಳನ್ನು ನಿಯೋಜಿಸಿತ್ತು ಎನ್ನುವುದನ್ನು ಸೂಚಿಸಿವೆ.

ಚೀನಾದ ಹೆಚ್ಚಿನ ವೈಮಾನಿಕ ಚಟುವಟಿಕೆಗಳಿಂದಾಗಿ ಭಾರತವು ಅರುಣಾಚಲ ಪ್ರದೇಶದಲ್ಲಿ ಯುದ್ಧವಿಮಾನಗಳ ಗಸ್ತು ನಡೆಸುತ್ತಿರುವ ಸಂದರ್ಭದಲ್ಲಿ ಮ್ಯಾಕ್ಸರ್‌ನ ಈ ಉಪಗ್ರಹ ಚಿತ್ರಗಳು ಬಹಿರಂಗಗೊಂಡಿವೆ. ಕಳೆದ ಕೆಲವು ವಾರಗಳಲ್ಲಿ ಚೀನಿ ವಿಮಾನಗಳಿಂದ ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸುವ ಬೆದರಿಕೆಯನ್ನು ಪತ್ತೆ ಹಚ್ಚಿದ ಬಳಿಕ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಕನಿಷ್ಠ ಎರಡು ಸಂದರ್ಭಗಳಲ್ಲಿ ಅಲ್ಲಿ ಹಾರಾಟ ನಡೆಸಿದ್ದವು.

ಅರುಣಾಚಲ ಪ್ರದೇಶದ ಗಡಿಯಿಂದ ಕೇವಲ 150 ಕಿ.ಮೀ.ಅಂತರದಲ್ಲಿರುವ ಚೀನಾದ ಬಾಂಗ್ಡಾ ವಾಯುನೆಲೆಯ ಚಿತ್ರವೊಂದು ಅತ್ಯಾಧುನಿಕ ಡಬ್ಲುಝಡ್-7‘ಸೋರಿಂಗ್ ಡ್ರಾಗನ್ ’(WZ-7 Soaring Dragon )ಡ್ರೋನ್‌ನ ಉಪಸ್ಥಿತಿಯನ್ನು ತೋರಿಸಿದೆ. 2021ರಲ್ಲಿ ಮೊದಲ ಬಾರಿಗೆ ಅಧಿಕೃತವಾಗಿ ಅನಾವರಣಗೊಂಡಿದ್ದ ‘ಸೋರಿಂಗ್ ಡ್ರಾಗನ್ ’10 ಗಂಟೆಗಳವರೆಗೆ ತಡೆರಹಿತ ಹಾರಾಟದ ಸಾಮರ್ಥ್ಯವನ್ನು ಹೊಂದಿದ್ದು,ಅದನ್ನು ಗುಪ್ತಚರ,ಕಣ್ಗಾವಲು ಮತ್ತು ವಿಚಕ್ಷಣಾ ಕಾರ್ಯಾಚರಣೆಗಳಿಗಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ದಾಳಿ ಕ್ಷಿಪಣಿಗಳು ನೆಲದ ಮೇಲಿನ ಗುರಿಗಳ ಮೇಲೆ ಎರಗಲು ಸಾಧ್ಯವಾಗಿಸಲು ಡಾಟಾವನ್ನು ರವಾನಿಸುವ ಸಾಮರ್ಥ್ಯವನ್ನು ಹೊಂದಿರಬಹುದು.

ಬಾಂಗ್ಡಾ ವಾಯುನೆಲೆಯ ಡಿ.14ರ ಚಿತ್ರಗಳು ಎರಡು ಫ್ಲಾಂಕರ್ ಮಾದರಿಯ ಯುದ್ಧವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ತೋರಿಸಿವೆ. ಇವು ಭಾರತೀಯ ವಾಯುಪಡೆಯು ಕಾರ್ಯಾಚರಿಸುತ್ತಿರುವ ರಶ್ಯಾ ವಿನ್ಯಾಸದ ಎಸ್‌ಯು-30ಎಂಕೆಐ ಯುದ್ಧವಿಮಾನದ ಮೇಡ್-ಇನ್ ಚೈನಾ ರೂಪಾಂತರಗಳಾಗಿವೆ.

share
Next Story
X