Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಪ್ರಜ್ಞಾ ಕ್ರಾಫ್ಟ್ ಮೇಳದಲ್ಲಿ...

ಉಡುಪಿ: ಪ್ರಜ್ಞಾ ಕ್ರಾಫ್ಟ್ ಮೇಳದಲ್ಲಿ ದೇಶದ ಬಡಕಟ್ಟು ಕಲೆಗಳ ಅನಾವರಣ!

19 Dec 2022 11:42 PM IST
share
ಉಡುಪಿ: ಪ್ರಜ್ಞಾ ಕ್ರಾಫ್ಟ್ ಮೇಳದಲ್ಲಿ ದೇಶದ ಬಡಕಟ್ಟು ಕಲೆಗಳ ಅನಾವರಣ!

ಉಡುಪಿ, ಡಿ.19: ಉಡುಪಿ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆ ಹಾಗೂ ಪ್ರಾಚಿ ಉಡುಪಿ ಆಶ್ರಯದಲ್ಲಿ ಉಡುಪಿ ಪಿಪಿಸಿ ಕ್ಯಾಂಪಸ್‌ನಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಪ್ರಜ್ಞಾ ಕ್ರಾಫ್ಟ್ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಮೇಳದಲ್ಲಿ ಛತ್ತಿಸ್‌ಗಡ್ ರಾಜ್ಯದ ಬಸ್ತರ್ ಬುಡಕಟ್ಟು ಸಮುದಾಯದವರ ಕಂಚು, ಕಬ್ಬಿಣ ಹಾಗೂ ಮರದಿಂದ ತಯಾರಿಸಿದ ಲೋಹಶಿಲ್ಪದ ನಂದಿ, ಗಣೇಶ, ಕರ್ಮವೃಕ್ಷ, ಹ್ಯಾಂಡ್ ಮೇಡ್ ಬಾಚಣಿಗೆ, ಬಾಸುರಿ ಸೇರಿದಂತೆ ವಿವಿಧ ಕಲಾಕೃತಿಗಳು, ಬಾಗಲಕೋಟೆ ಜಿಲ್ಲೆಯ ಕೈಮಗ್ಗ ಸೀರೆಗಳು, ಗದಗ ಜಿಲ್ಲೆಯ ಜೊಂಡು ಹುಲ್ಲುನಿಂದ ತಯಾರಿಸಿದ ಟೊಪ್ಪಿ, ಬುಟ್ಟಿಗಳು ಅತ್ಯಾಕರ್ಷಕವಾಗಿವೆ.

ಕುಂದಾಪುರ ನಮ್ಮ ಅಂಗಡಿಯ ಉತ್ಪನ್ನಗಳು, ಮಹಾರಾಷ್ಟ್ರ ರಾಜ್ಯದ ಪಾಲ್ಘಾಟ್ ಜಿಲ್ಲೆಯ ವಾರ್ಲಿ ಟ್ರೈಬಲ್ ಆರ್ಟ್, ರತ್ನಗಿರಿ ಜಿಲ್ಲೆಯ ಕೈಯಿಂದ ತಯಾರಿಸಿದ ಬೆಡ್‌ಶೀಟ್, ಡೋರ್ ಮ್ಯಾಟ್, ಮಧ್ಯಪ್ರದೇಶ ರಾಜ್ಯದ ಗೊಂಡ್ ಆರ್ಟ್, ಸಾಗರದ ಚಿತ್ತಾರ ಆರ್ಟ್ ಮತ್ತು ಕಲಾವಿದ ಕೆ.ಗೌತಮ್ ಅರ್ಕಲಿಕ್ ಮಾಧ್ಯಮದಲ್ಲಿ ತಯಾರಿಸಿದ ಕಲಾಕೃತಿಗಳು, ಬೆಳಗಾಂ ಖಾನಪುರದ ಮಣ್ಣಿನ ಮಡಕೆ, ವಾಸ್ತು ದೀಪ, ಗಂಟೆ ಅಲಂಕಾರಿಕಾ ವಸ್ತುಗಳು, ವಿಶಿಷ್ಟವಾಗಿ ದ್ದವು.

ತುಮಕೂರಿನ ಹ್ಯಾಂಡಮೇಡ್ ಲ್ಯಾಂಪ್ಸ್, ಬಾಗಲಕೋಟೆಯ ಇಳಕಲ್ ಸೀರೆ, ಹೂವಿನಹಡಗಲಿಯಿಂದ ಖಾದಿ ವಸ್ತ್ರಗಳು, ಮೆಕ್ಕೆಜೋಳದ ಸಿಪ್ಪೆಯಿಂದ ತಯಾರಿಸಿದ ಹೂಗುಚ್ಛಗಳು, ತಾಳಿಪಾಡಿ ಕೈಮಗ್ಗ ಸೀರೆಗಳು, ವಿಜಯಪುರದಿಂದ ತಂದಿರುವ ತಾಮ್ರ ಮತ್ತು ಬೆಳ್ಳಿಯಿಂದ ತಯಾರಿಸಿದ ಹ್ಯಾಂಡಮೇಡ್ ಆಭರಣ ಗಳು ಪ್ರಮುಖ ಆಕರ್ಷಣೆಯಾಗಿದೆ. ಸುಮಾರು 25 ವಿವಿಧ ಸ್ಟಾಲ್‌ಗಳು ಮೇಳದಲ್ಲಿವೆ. ನಾಳೆ ಬಿಹಾರ ರಾಜ್ಯದ ಮಧುಬನಿ ಆರ್ಟ್, ಮಂಜುಶಾ, ಗೋಧುನ ಟ್ಯಾಟು ಆರ್ಟ್‌ಗಳು ಬರಲಿವೆ ಎಂದು ಸಂಘಟಕ ಹಾಗೂ ಕಲಾವಿದ ಪುರುಷೋತ್ತಮ ಅಡ್ವೆ ತಿಳಿಸಿದ್ದಾರೆ.

ಮೇಳ ಉದ್ಘಾಟನೆ: ಮೇಳವನ್ನು ಉದ್ಘಾಟಿಸಿದ ಕರ್ನಾಟಕ ಕರಕುಶಲ ಮಂಡಳಿಯ ಜಂಟಿ ಕಾರ್ಯದರ್ಶಿ ಎನ್.ಶಶಿಧರ್ ಮಾತನಾಡಿ, ಹಸ್ತಶಿಲ್ಪಗಳು ಪರಿಸರಕ್ಕೆ ಪೂರಕ ವಾಗಿದ್ದು, ಸಮಾಜದ ಮುಖ್ಯ ಅಂಗವಾಗಿದೆ. ಹಸ್ತಶಿಲ್ಪ ನಶಿಸಿದರೆ ಮುಂದಿನ ಜನಾಂಗಕ್ಕೆ ನಷ್ಟವಾಗುವುದರಿಂದ ಕರಕುಶಲಕರ್ಮಿಗಳಿಗೆ ಆದ್ಯತೆ ನೀಡಬೇಕು. ಆದರೆ ಸರಕಾರದ ಬಳಿ ಹಸ್ತಶಿಲ್ಪಿಗಳ ಅಂಕಿಅಂಶಗಳಿಲ್ಲದಿರು ವುದು ಖೇದಕರ ಸಂಗತಿ ಎಂದರು.

ಮುಖ್ಯ ಅತಿಥಿಗಳಾಗಿ ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿ ಕಾರ್ಯ ದರ್ಶಿ ಡಾ.ಚಂದ್ರಶೇಖರ್, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ. ಲಕ್ಷ್ಮೀ ನಾರಾಯಣ ಮಾತನಾಡಿದರು. ಪಿಪಿಸಿ ಪ್ರಾಂಶುಪಾಲ ಡಾ.ರಾಘವೇಂದ್ರ ಎ., ಆಡಳಿತಾಧಿಕಾರಿ ಡಾ.ಎ.ಪಿ.ಭಟ್ ಮೊದಲಾದವರು ಉಪಸ್ಥಿತರಿದ್ದರು.

ಸಂಧ್ಯಾ ಕಾಲೇಜು ಪ್ರಾಂಶುಪಾಲೆ ಡಾ.ಸುಕನ್ಯಾ ಮೇರಿ ಸ್ವಾಗತಿಸಿದರು. ಪ್ರಾಧ್ಯಾಪಕಿ ಶ್ರೀರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಪಿಯು ಕಾಲೇಜು ಪ್ರಾಂಶುಪಾಲೆ ಪ್ರತಿಮಾ ಬಾಳಿಗಾ ವಂದಿಸಿದರು.

share
Next Story
X