ಬೆಂಗಳೂರು: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿರುವುದು ವರದಿಯಾಗಿದೆ.
ಯಶೋಧ (70), ಮಗಳು ಸುಮನ್ ಗುಪ್ತಾ(41) ಹಾಗೂ ಪುತ್ರ ನರೇಶ್ ಗುಪ್ತಾ (36) ಮೃತರು ಎಂದು ತಿಳಿದು ಬಂದಿದೆ.
ಸೋಮವಾರ ರಾತ್ರಿ ಘಟನೆ ನಡೆದಿದ್ದು ಬೆಳಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
Next Story





