Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ...

ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಸ್ಥಾನಕ್ಕೇರಲು ಎಸ್‌ಸಿ/ಎಸ್‌ಟಿಗಳಿಗೆ ಅವಕಾಶ ನೀಡುತ್ತಿಲ್ಲ: ಸಂಸದೀಯ ಸಮಿತಿ

20 Dec 2022 3:08 PM IST
share
ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಸ್ಥಾನಕ್ಕೇರಲು ಎಸ್‌ಸಿ/ಎಸ್‌ಟಿಗಳಿಗೆ ಅವಕಾಶ ನೀಡುತ್ತಿಲ್ಲ: ಸಂಸದೀಯ ಸಮಿತಿ

ಹೊಸದಿಲ್ಲಿ: ಪರಿಶಿಷ್ಟ ಜಾತಿ ಹಾಗೂ  ಪರಿಶಿಷ್ಟ ಪಂಗಡಗಳ ಸಮುದಾಯದ ಸದಸ್ಯರಿಗೆ ಸಾರ್ವಜನಿಕ ವಲಯದ ಘಟಕಗಳಲ್ಲಿ(ಪಿಎಸ್ ಯು) ಹಿರಿಯ ಅಥವಾ ಮಂಡಳಿಯ ಮಟ್ಟದ ಸ್ಥಾನಗಳಿಗೆ ಏರಲು ಅವಕಾಶವನ್ನು ನೀಡಲಾಗುತ್ತಿಲ್ಲ ಎಂದು ಸಂಸದೀಯ ಸಮಿತಿಯು ಸೋಮವಾರ ತನ್ನ ವರದಿಯಲ್ಲಿ ತಿಳಿಸಿದೆ ಎಂದು PTI ವರದಿ ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣದ ಸಂಸದೀಯ ಸಮಿತಿಯು ಸಂಸತ್ತಿನ ಮುಂದೆ “ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್‌ ವಿಶೇಷ ಉಲ್ಲೇಖದೊಂದಿಗೆ ಮಂಡಿಸಲಾದ ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ” ಎಂಬ ವರದಿಯಲ್ಲಿ ಹೇಳಿಕೆ ನೀಡಿದೆ.

ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಒದಗಿಸುವ ದೃಷ್ಟಿಯಿಂದ, ಮಂಡಳಿ/ಹಿರಿಯ ಮಟ್ಟದ ನೇಮಕಾತಿಗಳಲ್ಲಿ ಎಸ್‌ಸಿ/ಎಸ್‌ಟಿಗಳಿಂದ ಅರ್ಹ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲು ಸರಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿಯು ಭಾವಿಸುತ್ತದೆ ” ಎಂದು ಬಿಜೆಪಿ  ಸಂಸದ ಕಿರಿತ್ ಸೋಲಂಕಿ  ನೇತೃತ್ವದ ಸಮಿತಿಯು ಹೇಳಿದೆ.

ಸಾರ್ವಜನಿಕ ವಲಯದ ಘಟಕಗಳಲ್ಲಿ ಹಿರಿಯ ಮಟ್ಟದ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಿದ್ದ ಪರಿಶಿಷ್ಟ ಜಾತಿ  ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಂಖ್ಯೆ ಹಾಗೂ ಅವರು ಆಯ್ಕೆಯಾಗದಿರಲು ಕಾರಣವನ್ನು ತಿಳಿಯಲು ಬಯಸುವುದಾಗಿ ಸಮಿತಿ ಹೇಳಿದೆ.

ಬ್ಯಾಂಕ್‌ನ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಹಾಗೂ  ಪರಿಶಿಷ್ಟ ಪಂಗಡದ ನಿರ್ದೇಶಕರು ಏಕೆ ಇಲ್ಲ ಎಂದು ಸಮಿತಿಯು ಸರಕಾರವನ್ನು ಪ್ರಶ್ನಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನಿರ್ದೇಶಕರ ಮಂಡಳಿಯಲ್ಲಿ ಯಾವುದೇ ಪರಿಶಿಷ್ಟ ಜಾತಿ ಹಾಗೂ  ಪರಿಶಿಷ್ಟ ಪಂಗಡಗಳ ಅಧಿಕಾರಿ ಇಲ್ಲ ಎನ್ನುವುದನ್ನು ಸಮತಿಯು ಗಮನಿಸಿದೆ ಎಂದು The Indian Express ವರದಿ ಮಾಡಿದೆ.

share
Next Story
X