Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಹಣಕ್ಕಾಗಿ ಸ್ನೇಹಿತನ ಹತ್ಯೆಗೈದ...

ಉಡುಪಿ: ಹಣಕ್ಕಾಗಿ ಸ್ನೇಹಿತನ ಹತ್ಯೆಗೈದ ಆರೋಪ ಸಾಬೀತು; ಅಪರಾಧಿಗೆ ಜೀವಾವಧಿ ಶಿಕ್ಷೆ​

2017ರಲ್ಲಿ ಚೇರ್ಕಾಡಿಯಲ್ಲಿ ನಡೆದ ಕೊಲೆ ಪ್ರಕರಣ

20 Dec 2022 6:48 PM IST
share
ಉಡುಪಿ: ಹಣಕ್ಕಾಗಿ ಸ್ನೇಹಿತನ ಹತ್ಯೆಗೈದ ಆರೋಪ ಸಾಬೀತು; ಅಪರಾಧಿಗೆ ಜೀವಾವಧಿ ಶಿಕ್ಷೆ​
2017ರಲ್ಲಿ ಚೇರ್ಕಾಡಿಯಲ್ಲಿ ನಡೆದ ಕೊಲೆ ಪ್ರಕರಣ

ಉಡುಪಿ, ಡಿ.20: ಐದು ವರ್ಷಗಳ ಹಿಂದೆ ಜಿಲ್ಲೆಯ ಚೇರ್ಕಾಡಿ ಎಂಬಲ್ಲಿ ಹಣಕ್ಕಾಗಿ ಪೀಡಿಸಿ ಸ್ನೇಹಿತನಿಗೆ ಚೂರಿ ಇರಿದು ಕೊಂದ ಪ್ರಕರಣದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆಯಲ್ಲಿ ಆತ ದೋಷಿ ಎಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಘೋಷಿಸಿದ್ದಾರೆ.

ಪ್ರಶಾಂತ್ ಕುಲಾಲ್ ಅಲಿಯಾಸ್ ಪಚ್ಚು ಯಾನೆ ಮಣಿ (31) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.

ಪ್ರಕರಣದ ಹಿನ್ನೆಲೆ: 2017ರ ಮಾ.1ರಂದು ಬೆಳಿಗ್ಗೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೇರ್ಕಾಡಿ ಗ್ರಾಮದ ಪೇತ್ರಿ ಎಂಬಲ್ಲಿರುವ ಅಶ್ವತ್ಥ ಕಟ್ಟೆ ಬಳಿ ಆರೋಪಿ ಪ್ರಶಾಂತ್ ತನ್ನ ಸ್ನೇಹಿತನಾದ ಪ್ರಕಾಶ್ ನಾಯ್ಕ್(38) ಎಂಬಾತನ ಬಳಿ ಹಣ ನೀಡುವಂತೆ ತಗಾದೆ ತೆಗೆದಿದ್ದು ಹಣ ನೀಡಲು ನಿರಾಕರಿಸಿದಾಗ ತನ್ನ ಕಿಸೆಯಲ್ಲಿದ್ದ ಚೂರಿ ತೆಗೆದು ಪ್ರಕಾಶನಿಗೆ ಇರಿದು ಕೊಲೆ ಮಾಡಿದ್ದ. ಕೊಲೆಯಾದ ಪ್ರಕಾಶ್ ದಲಿತನಾಗಿದ್ದು, ಕೊಲೆ ಪ್ರಕರಣ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬ್ರಹ್ಮಾವರ ಪೊಲೀಸರು ಪ್ರಶಾಂತನನ್ನು ಬಂಧಿಸಿದ್ದರು.

ಶಿವಮೊಗ್ಗದಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಪ್ರಕಾಶ್ ನಾಯ್ಕ್ ಹಾಗೂ ಗಾರೆ ಕೆಲಸ ಮಾಡುತ್ತಿದ್ದ ಪ್ರಶಾಂತ್ ಗೆಳೆಯರಾಗಿದ್ದು ಆಗಾಗ್ಗೆ ಪ್ರಕಾಶ್ ಬಳಿ ಆರೋಪಿ ಹಣ ಪಡೆದುಕೊಂಡಿದ್ದ. ಘಟನೆ ಬಗ್ಗೆ ಕೊಲೆಯಾದ ಪ್ರಕಾಶ್ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಂದಿನ ಉಡುಪಿ ಉಪವಿಭಾಗದ ಡಿವೈಎಸ್ಪಿ ಎಸ್.ಜೆ ಕುಮಾರಸ್ವಾಮಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಒಟ್ಟು 34 ಸಾಕ್ಷ್ಯಾಧಾರಗಳ ಪೈಕಿ 12 ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಪೈಕಿ ಪ್ರತ್ಯಕ್ಷದರ್ಶಿಗಳು ನುಡಿದ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿದ್ದು ಆರೋಪಿಗೆ ಶಿಕ್ಷೆಯಾಗುವಲ್ಲಿ ಸಹಕಾರಿಯಾಗಿದೆ.

ಅಪರಾಧಿಗೆ ಕೊಲೆ ಪ್ರಕರಣ (ಐಪಿಸಿ ಸೆಕ್ಷನ್ 302) ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ  3 ವರ್ಷ ಕಾರಾಗೃಹ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಹಿರಿಯ ಸರಕಾರಿ ಅಭಿಯೋಜಕಿ ಶಾಂತಿಬಾಯಿ ವಾದ ಮಂಡಿಸಿದ್ದರು.

ಪೋಕ್ಸೋದಲ್ಲಿ ಅಪರಾಧಿಯಾಗಿದ್ದ..!
ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಪಟ್ಟ ಅಪರಾಧಿ ಪ್ರಶಾಂತ್ ಈ ಹಿಂದೆ ಪೋಕ್ಸೋ ಕಾಯ್ದೆಯಡಿ 20 ವರ್ಷ ಶಿಕ್ಷೆಗೊಳಪಟ್ಟಿದ್ದ. 2013ರಲ್ಲಿ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿ ಬಳಿಕ ಜಾಮೀನು ಪಡೆದು ಹೊರಗಡೆ ಬಂದಿದ್ದು ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದ್ದಲ್ಲಿದ್ದಾಗಲೇ 2017ರಲ್ಲಿ ಸ್ನೇಹಿತನ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಮತ್ತೆ ಜೈಲು ಸೇರಿದ್ದ.

2018ರ ಎಪ್ರಿಲ್ ತಿಂಗಳಿನಲ್ಲಿ ಪೋಕ್ಸೋ ಪ್ರಕರಣದ ಅಂತಿಮ ತೀರ್ಪು ಉಡುಪಿಯ  ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಪ್ರಕಟಗೊಳ್ಳುವ ವೇಳೆ ಗರಿಷ್ಟ ಪ್ರಮಾಣದ ಶಿಕ್ಷೆ ವಿಧಿಸಲು ಅಂದಿನ ವಿಶೇಷ ಸರ್ಕಾರಿ ಅಭಿಯೋಜಕರು ನ್ಯಾಯಾಧೀಶರ ಬಳಿ ಮನವಿ ಮಾಡಿದ್ದು, 20 ವರ್ಷ ಶಿಕ್ಷೆಯನ್ನು ನ್ಯಾಯಾಧೀಶರು ಪ್ರಕಟಿಸುತ್ತಿದ್ದಂತೆಯೇ ಪ್ರಶಾಂತ್ ತನ್ನ ಎರಡು ಶೂಗಳನ್ನು ನ್ಯಾಯಾಧೀಶರ ಮುಂದೆಯೇ ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಎಸೆದು ಬೆದರಿಕೆ ಕೂಡ ಹಾಕಿದ್ದ. ಈ ಬಗ್ಗೆಯೂ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

share
Next Story
X