ದಾವಣಗೆರೆ | ಸಾಲಬಾಧೆ: ರೈತ ಆತ್ಮಹತ್ಯೆ

ದಾವಣಗೆರೆ: ವಿಷ ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಿದ್ದನೂರು ಲಂಬಾಣಿ ಹಟ್ಟಿ ಗ್ರಾಮದಲ್ಲಿ ನಡೆದಿದೆ.
ಗೋವಿಂದನಾಯ್ಕ್ (55) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದು ಬಂದಿದೆ.
ಸಹಕಾರಿ ಬ್ಯಾಂಕಿನಲ್ಲಿ ಸಾಲ ತೆಗೆದುಕೊಂಡಿದ್ದ ಗೋವಿಂದನಾಯ್ಕ್ ಗೆ 70 ಸಾವಿರ ರೂ. ಸಾಲ ಮರು ಪಾವತಿಸುವಂತೆ ಬ್ಯಾಂಕಿನಿಂದ ನೋಟಿಸ್ ಕಳುಹಿಸಿದ್ದು, ಬೆಳೆ ನಷ್ಟದಿಂದ ಸಾಲ ತೀರಿಸಲು ಆಗದೇ ಮನನೊಂದು ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





