Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳೊಂದಿಗೆ ಸೂಕ್ಷ್ಮವಾಗಿ ವರ್ತಿಸುವ...

ಮಕ್ಕಳೊಂದಿಗೆ ಸೂಕ್ಷ್ಮವಾಗಿ ವರ್ತಿಸುವ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.

ಜ.6ಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

20 Dec 2022 7:58 PM IST
share
ಮಕ್ಕಳೊಂದಿಗೆ ಸೂಕ್ಷ್ಮವಾಗಿ ವರ್ತಿಸುವ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.
ಜ.6ಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಉಡುಪಿ: ಶಾಲಾ ಮಕ್ಕಳೊಂದಿಗೆ ಮೃದುವಾಗಿ ಮತ್ತು ಅವರ ಮನಸ್ಸನ್ನು ಅರಿತು ಅತ್ಯಂತ ಸೂಕ್ಷ್ಮವಾಗಿ ವರ್ತಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶಿಕ್ಷಕರಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚನೆಗಳನ್ನು ನೀಡಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕುರಿತು ವರದಿಯಾಗುತ್ತಿದೆ. ಮಕ್ಕಳು ಅತ್ಯಂತ ಮೃದು ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಿಕ್ಷಕರು ಮಕ್ಕಳ ಸ್ವಭಾವವನ್ನು ಅರಿತು, ಸ್ಥಿತಿಪ್ರಜ್ಞರಾಗಿ ಮಕ್ಕಳೊಂದಿಗೆ ವರ್ತಿಸಬೇಕಾಗುತ್ತದೆ. ಈ ಬಗ್ಗೆ ಶಿಕ್ಷಕ ತರಬೇತಿ ಅವಧಿಯಲ್ಲಿ ತರಬೇತಿ ನೀಡಿದ್ದರೂ ಸಹ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಅಪರ ಜಿಲ್ಲಾಧಿಕಾರಿ ಅತ್ಯಂತ ಬೇಸರ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆ ಯಾಗಿ, ಶಿಕ್ಷಕರು ಮಕ್ಕಳೊಂದಿಗೆ ಸೂಕ್ಷ್ಮ ಮತ್ತು ಸಂಯಮದಿಂದ ವರ್ತಿಸುವ ಕುರಿತಂತೆ

ಶೀಘ್ರದಲ್ಲಿ ಜಿಲ್ಲೆಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮತ್ತು ಮಕ್ಕಳ ಹಕ್ಕುಗಳು, ಅವುಗಳ ರಕ್ಷಣೆ ಕುರಿತಂತೆ ಸಹ ಅಗತ್ಯ ಮಾಹಿತಿ ನೀಡುವಂತೆ ಸೂಚಿಸಿದರು.

ಜನವರಿ 6ರಂದು ಜಿಲ್ಲೆಗೆ ಭೇಟಿ ನೀಡುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತುಅವರ ನಿಯೋಗಕ್ಕೆ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಕೈಗೊಂಡಿರುವ ಎಲ್ಲಾ ಕ್ರಮಗಳ ಕುರಿತು ಸಂಪೂರ್ಣ ದಾಖಲಾತಿಗಳನ್ನು ಸಿದ್ಧಪಡಿಸಿಟ್ಟುಕೊಂಡು ವರದಿ ನೀಡುವಂತೆ ತಿಳಿಸಿದರು. ಅಲ್ಲದೇ ಮಕ್ಕಳ ಸಂರಕ್ಷಣೆ, ಸುರಕ್ಷತೆ ಮತ್ತು ಬೆಳವಣಿಗೆಗಾಗಿ ಜಿಲ್ಲೆಯಲ್ಲಿ ಹಲವು ನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಇವುಗಳ ಬಗ್ಗೆ ಸಮರ್ಪಕ ವಿವರವಾದ ವರದಿಯನ್ನು ನಿಯೋಗಕ್ಕೆ  ನೀಡುವಂತೆ ಎಡಿಸಿ ತಿಳಿಸಿದರು.

ಕಾರ್ಮಿಕ ಇಲಾಖೆ ವತಿಯಿಂದ, ಕಾರ್ಮಿಕ ಮಕ್ಕಳ ಶಿಕ್ಷಣಕ್ಕಾಗಿ ಉಡುಪಿ ಬೀಡನಗುಡ್ಡೆ ಮತ್ತು ಬ್ರಹ್ಮಾವರದ ಇಂದಿರಾನಗರದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದಿದ್ದು, ಈ ಕೇಂದ್ರಗಳ ಪ್ರಯೋಜನ ಪಡೆಯುವಂತೆ ವಲಸೆ ಕಾರ್ಮಿಕರಿಗೆ ಅರಿವು ಮೂಡಿಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಹಾಸ್ಟೆಲ್ ಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಈಗಾಗಲೇ ಹಾಸ್ಟೆಲ್‌ಗಳಿಗೆ ನಿಯೋಜಿಸಿರುವ ನೋಡೆಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆಗಳನ್ನು ನಡೆಸಿ, ಮಕ್ಕಳ ಸಮಸ್ಯೆಗಳು ಮತ್ತು ಅವುಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸುವಂತೆ ಮತ್ತು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಮಕ್ಕಳ ಸುರಕ್ಷತೆ ಮತ್ತು ಸಂರಕ್ಷಣೆಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅಪರಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶಿವಕುಮಾರಯ್ಯ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಯಲ್ಲಿ ತೊಡಗಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
Next Story
X