ಬೆಂಗಳೂರು: ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಬೆಂಗಳೂರು, ಡಿ.20: ವಿಕಲಚೇತನ ಮಗಳನ್ನು ಹತ್ಯೆಗೈದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಉಸಿರುಗಟ್ಟಿಸಿ 10 ವರ್ಷದ ಮಗಳನ್ನು ಕೊಲೆಗೈದಿರುವ ತಾಯಿ ಸುಮಾ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಪತಿ ಹಾಗೂ ಮೊದಲ ಮಗುವನ್ನು ಕಳೆದುಕೊಂಡಿದ್ದ ಸುಮಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಅಲ್ಲದೇ, ಎರಡನೆ ಮಗು ವಿಕಲಚೇತನಳಾಗಿದ್ದ ಹಿನ್ನೆಲೆಯಲ್ಲಿ ಮತ್ತಷ್ಟು ಮಾನಸಿಕವಾಗಿ ಕುಗ್ಗಿದ್ದರು. ಇದರಿಂದ ಈ ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Next Story





