Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2021-22 ರಲ್ಲಿ 20 ಸಾವಿರಕ್ಕೂ ಅಧಿಕ...

2021-22 ರಲ್ಲಿ 20 ಸಾವಿರಕ್ಕೂ ಅಧಿಕ ಶಾಲೆಗಳು ಮುಚ್ಚಿವೆ: ಕೇಂದ್ರ ಸರ್ಕಾರ ಮಾಹಿತಿ

ಶಿಕ್ಷಕರ ಸಂಖ್ಯೆಯಲ್ಲಿ 1.9 ಲಕ್ಷ ಕುಸಿತ

21 Dec 2022 10:42 PM IST
share
2021-22 ರಲ್ಲಿ 20 ಸಾವಿರಕ್ಕೂ ಅಧಿಕ ಶಾಲೆಗಳು ಮುಚ್ಚಿವೆ: ಕೇಂದ್ರ ಸರ್ಕಾರ ಮಾಹಿತಿ
ಶಿಕ್ಷಕರ ಸಂಖ್ಯೆಯಲ್ಲಿ 1.9 ಲಕ್ಷ ಕುಸಿತ

ಹೊಸದಿಲ್ಲಿ: 2021-22ರಲ್ಲಿ ಸುಮಾರು 20,000 ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ಸುಮಾರು 1.9 ಲಕ್ಷ ಶಿಕ್ಷಕರ ಸಂಖ್ಯೆಯಲ್ಲಿ ಕುಸಿತವಾಗಿದೆ ಎಂದು ಕೇಂದ್ರ ಸರ್ಕಾರ ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ತಿಳಿಸಿದೆ.

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ಅವರ ಪ್ರಶ್ನೆಗೆ ಉತ್ತರವಾಗಿ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಅವರು ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ.

2020-21ರಲ್ಲಿ ಖಾಸಗಿ ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ ದೇಶದಲ್ಲಿ 15,09,136 ಶಾಲೆಗಳಿದ್ದವು. 2021-22ರಲ್ಲಿ ಈ ಸಂಖ್ಯೆ 14,89,115ಕ್ಕೆ ಇಳಿದಿದೆ. ಇದೇ ಅವಧಿಯಲ್ಲಿ ಶಿಕ್ಷಕರ ಸಂಖ್ಯೆ 96,96,425 ರಿಂದ 95,07,123ಕ್ಕೆ ಇಳಿಕೆಯಾಗಿದೆ.

ಸರ್ಕಾರವು ತನ್ನ ಯುನೈಟೆಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (UDISE+) ಅಡಿಯಲ್ಲಿ ಶಾಲೆಗಳ ಡೇಟಾವನ್ನು ಸಂಗ್ರಹಿಸುತ್ತದೆ. UDISE+ ಡೇಟಾ ಪ್ರಕಾರ, 2020-21ರಲ್ಲಿ 10,32,049 ಸರ್ಕಾರಿ ಶಾಲೆಗಳಿದ್ದು, 2019-20ರಲ್ಲಿ 10,32,570 ಮತ್ತು 2018-19ರಲ್ಲಿ 10,83,678 ಶಾಲೆಗಳಿದ್ದವು.

"ಸಾಂಕ್ರಾಮಿಕ ಹಿನ್ನೆಲೆ ಹಾಗೂ ಇತರೆ ಕಾರಣಗಳಿಂದ ಖಾಸಗಿ ಮತ್ತು ಇತರ ನಿರ್ವಹಣೆಯ ಅಡಿಯಲ್ಲಿರುವ ಶಾಲೆಗಳು ಮುಚ್ಚಲ್ಪಟ್ಟ ಕಾರಣದಿಂದಾಗಿ 2021-22 ರಲ್ಲಿ ಒಟ್ಟು ಶಾಲೆಗಳ ಸಂಖ್ಯೆಯಲ್ಲಿ ಕುಸಿತವಾಗಿದೆ” ಎಂದು ಸಚಿವರು ಸಂಸತ್ತಿಗೆ ತಿಳಿಸಿದ್ದಾರೆ. 

“ಹಾಗೆಯೇ, ಸಾಂಕ್ರಾಮಿಕ ಸಮಯದಲ್ಲಿ ಶಾಲೆಗಳು ಆನ್‌ಲೈನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಖಾಸಗಿ ಶಾಲೆಗಳಲ್ಲಿ ಕಡಿಮೆ ಶಿಕ್ಷಕರನ್ನು ನಿಯೋಜಿಸಿರುವುದು ಶಿಕ್ಷಕರ ಸಂಖ್ಯೆಯಲ್ಲಿ ಕುಸಿತಕ್ಕೆ ಮುಖ್ಯ ಕಾರಣವಾಗಿದೆ" ಎಂದು ಅವರು ಹೇಳಿದ್ದಾರೆ. 

ಅದೇ ವೇಳೆ, ಕೋವಿಡ್‌ ಅವಧಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಏರಿಕೆಯಾಗಿದೆ. UDISE+ ನಲ್ಲಿ ದಾಖಲಾದ ಮಾಹಿತಿಯ ಪ್ರಕಾರ, 2019-20ರಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ 13.09 ಕೋಟಿ ಆಗಿತ್ತು. ಇದು 2020-21ರಲ್ಲಿ 13.49 ಕೋಟಿಗೆ ಮತ್ತು 2021-22ರಲ್ಲಿ 14.32 ಕೋಟಿಗೆ ಏರಿದೆ. ಖಾಸಗಿ ಶಾಲೆಗಳಲ್ಲಿನ ದಾಖಲಾತಿಯು 2019-20 ರಲ್ಲಿ 9.82 ಕೋಟಿ ಇತ್ತು. ಈ ಸಂಖ್ಯೆ 2020-21ರಲ್ಲಿ 9.51 ಕೋಟಿ ಇಳಿದಿದೆ.  ಇದು 2021-22ರ ಅವಧಿಯಲ್ಲಿ 8.82 ಕೋಟಿಗೆ ಕುಸಿದಿದೆ.

2016ರಲ್ಲಿ, ಸರ್ಕಾರಿ ಕಾರ್ಯದರ್ಶಿಗಳ ಗುಂಪು ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳ ಏಕೀಕರಣ ಅಥವಾ ವಿಲೀನಕ್ಕೆ ಶಿಫಾರಸು ಮಾಡಿತ್ತು. ಮುಂದಿನ ವರ್ಷ ನೀತಿ ಆಯೋಗವು ಈ ಪ್ರಸ್ತಾವನೆಯನ್ನು ಬೆಂಬಲಿಸಿತ್ತು. ರಾಜ್ಯಗಳೊಂದಿಗಿನ ಸಭೆಗಳಲ್ಲಿ, ಅಂದಿನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಸಣ್ಣ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸುವಂತೆ ಪ್ರೋತ್ಸಾಹಿಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ, ಪ್ರತಿ ತರಗತಿಗೂ ಒಬ್ಬ ಶಿಕ್ಷಕರಿರಬೇಕು. ಒಂದು ಪ್ರಾಥಮಿಕ ಶಾಲೆಯಲ್ಲಿ ಐದು ತರಗತಿಗಳಲ್ಲಿ 50 ಕ್ಕಿಂತ ಕಡಿಮೆ ಮಕ್ಕಳಿದ್ದರೆ, ಐದು ಸಾಮಾನ್ಯ ಶಿಕ್ಷಕರನ್ನು ಹೊಂದಿರುವ ಅಂತಹ ಶಾಲೆಗಳ ನಿರ್ವಹಣೆಯು ಸರ್ಕಾರಕ್ಕೆ ದುಬಾರಿಯಾಗುತ್ತದೆ. 

ಇದೇ ವೇಳೆ, 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಮುಚ್ಚಲು ಒಡಿಶಾ ನಿರ್ಧರಿಸಿದೆ ಮತ್ತು ಅಂತಹ ಸುಮಾರು 14,000 ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸಲು ನಿರ್ಧರಿಸಿದೆ. ಇಲ್ಲಿಯವರೆಗೆ, ಇದು ಸುಮಾರು 5,000 ಶಾಲೆಗಳನ್ನು ಒಡಿಶಾದಲ್ಲಿ ಮುಚ್ಚಲಾಗಿದೆ.

share
Next Story
X