Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ...

ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ ಕೈಗೊಳ್ಳಿ: ರಾಜ್ಯ ಸರಕಾರಕ್ಕೆ ರಮಾನಾಥ ರೈ ಒತ್ತಾಯ

22 Dec 2022 2:06 PM IST
share
ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ ಕೈಗೊಳ್ಳಿ: ರಾಜ್ಯ ಸರಕಾರಕ್ಕೆ ರಮಾನಾಥ ರೈ ಒತ್ತಾಯ

ಮಂಗಳೂರು, ಡಿ. 22: ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು ಕೇಂದ್ರಕ್ಕೆ ರಾಜ್ಯ ಸರಕಾರ ಕಳುಹಿಸಿದೆ. ಅದನ್ನು ಜಾರಿಗೊಳಿಸುವ ಪ್ರಯತ್ನ ಮಾಡಲಿ ಎಂದು ಅವರು ತಾಕೀತು ಮಾಡಿದರು.

ಅರಣ್ಯ ಸಂರಕ್ಷಣೆಗಾಗಿ ಗಾಡ್ಗೀಳ್ ವರದಿ ಮಂಡಿಸಿದಾಗ ಅರಣ್ಯದಂಚಿನ ಜನರು ವಿರೋಧ ಮಾಡಿದಾಗ ಅಂದಿನ ಸಕಾರ ಕಸ್ತೂರಿನ ರಂಗನ್ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ಗಾಡ್ಗೀಳ್ ವರದಿಯ ಸರತಿ ತಪ್ಪುಗಳನ್ನು ಸರಿಪಡಿಸಿ ವರದಿ ನೀಡುವಂತೆ ಸೂಚಿಸಿತ್ತು. ಅದರಂತೆ ಕಸ್ತೂರಿ ರಂಗನ್ ನೇತೃತ್ವದಲ್ಲಿ ಸಮಿತಿಯು ಕರ್ನಾಟಕ, ತಮಿಳುನಾಢು, ಕೇರಳ, ಆಂಧ್ರ, ತೆಲಂಗಾಣ, ಗೋವಾ ರಾಜ್ಯಗಳಿಗೆ ಸಂಬಂಧಿಸಿ ವರದಿ ತಯಾರಿಸಿದ್ದನ್ನು ಕರಡು ಅಧಿಸೂಚನೆ ಪ್ರಕಟಿಸಿ ಆಕ್ಷೇಪ ಸಲ್ಲಿಸಲು ಸೂಚಿಸಿತ್ತು. ಆಗ ವಿಪಕ್ಷದಲ್ಲಿದ್ದ ಬಿಜೆಪಿ ಭಾರೀ ಗುಲ್ಲೆಬ್ಬಿಸಿತ್ತು. ಬಳಿಕ ನಾಲ್ಕೈದು ಕರಡು ಅಧಿಸೂಚನೆ ಪ್ರಕಟವಾಗಿತ್ತು. ಬಳಿಕ ಕೇಂದ್ರದಲ್ಲಿ ಸರಕಾರ ಬದಲಾವಣೆಯಾಯಿತು. ಆಗ ರಾಜ್ಯದಲ್ಲಿ ನಾನು ಅರಣ್ಯ ಸಚಿವನಾಗಿದ್ದೆ. ಹಿಂದೆ ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸಿ ಜನರನ್ನು ಬೀದಿಗೆ ತಳ್ಳುತ್ತಾರೆ ಎಂದಿದ್ದ ಬಿಜೆಪಿಯವರು ಈ ಸಂದರ್ಭದಲ್ಲಿ ರಾಜ್ಯ ಸರಕಾರ ಸಲ್ಲಿಸಿದ ವರದಿಯೇ ಸರಿ ಇಲ್ಲ ಎಂದರು. ಬಳಿಕ ಅಂತಿಮವಾಗಿ ನಮ್ಮ ಅವಧಿಯ ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಕೇಂದ್ರಕ್ಕೆ ಪತ್ರ ಕಳುಹಿಸಿತ್ತು. ಆ ಬಳಿಕವೂ ಮೂರ್ನಾಲ್ಕು ಬಾರಿ ಕರಡು ಅಧಿಸೂಚನೆ ಪ್ರಕಟವಾಗಿವೆ ಎಂದು ತಿಳಿಸಿದರು.

ಇದೀಗ ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಪತ್ರಿಕೆಗಳಲ್ಲಿ ಹೇಳಿಕೆ ನೀಡಿರುವುದನ್ನು ನೋಡಿದ್ದೇನೆ. ಅದನ್ನು ಜಾರಿ ಮಾಡುವುದು ಕೇಂದ್ರ ಸರಕಾರ. ರಾಜ್ಯದಲ್ಲಿ ನಮ್ಮ ಸರಕಾರ ಇದ್ದಾಗ ಈ ಬಗ್ಗೆ ವಿವಿಧ ಕಡೆ ಪ್ರತಿಭಟನೆ, ಹೋರಾಟ ನಡೆಸಿದ್ದ ಬಿಜೆಪಿ, ಇಂದು ಡಬ್ಬಲ್ ಇಂಜಿನ್ ಸರಕಾರ ಇರುವಾಗ ಅದನ್ನು ರದ್ದುಪಡಿಸಲು ಕ್ರಮ ವಹಿಸುವುದು ಬಿಟ್ಟು ವಿರೋಧ ಎಂದು ಹೇಳುವುದು ರಾಜಕೀಯ ಪ್ರೇರಿತ ಎಂದು ರಮಾನಾಥ ರೈ ಹೇಳಿದರು.

ಬಿಜೆಪಿ ಇಂತಹ ಪ್ರತಿಯೊಂದು ವಿಚಾರದಲ್ಲಿಯೂ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತದೆ. ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಪ್ರತಿಭಟನೆ, ಪಾದಯಾತ್ರೆ ಮಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲು ಇದೀಗ ಹಾಸನ, ಕೋಲಾರದಲ್ಲಿ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಕೂಡಾ ಇನ್ನೂ ಕರಡು ಅಧಿಸೂಚನೆಯ ಹಂತದಲ್ಲಿದ್ದು, ಇದು ಜೀವಂತವಾಗಿದ್ದು, ಎಂದಿಗೂ ತೂಗುಗತ್ತಿಯಾಗಿದೆ. ಬಿಜೆಪಿ ತನ್ನ ಹಿಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಕಸ್ತೂರಿ ರಂಗನ್ ವರದಿ ರದ್ದುಪಡಿಸುವುದಾಗಿ ಹೇಳಿಕೊಂಡಿತ್ತು. ಆದರೆ ಐದು ವರ್ಷವಾದರೂ ಆಗಿಲ್ಲ. ಎತ್ತಿನ ಹೊಳೆ ವಿಚಾರದಲ್ಲಿಯೂ ನಾನು ಎಂದೂ ಹಿಪಾಕ್ರಸಿ ಪಾಲಿಟಿಕ್ಸ್ ಮಾಡಿಲ್ಲ. ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಯ ಜನರಿಗೆ ತೊಂದರೆ ಆದರೆ ಪಶ್ಚಿಮ ವಾಹಿನಿ ಯೋಜನೆಗಾಗಿ ಸುಮಾರು 60 ಮಂದಿಯ ರೈತರ ನಿಯೋಗವನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರ ಬಳಿ ಕರೆದೊಯ್ದು, ಬಜೆಟ್‌ನಲ್ಲಿ ಹಣ ಮಂಜೂರು ಮಾಡಲಾಗಿತ್ತು. ಬಳಿಕ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಕಳೆದ ವರ್ಷ ಮತ್ತು ಈ ವರ್ಷ ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ. ಅಂದು ಎತ್ತಿನಹೊಳೆ ವಿರುದ್ಧ ಪಾದಯಾತ್ರೆ ಮಾಡಿ ಇಂದು ಎತ್ತಿನ ಹೊಳೆ ಯೋಜನೆಗಾಗಿ ಕರಸೇವೆ ರೀತಿ ಚಳವಳಿ ಮಾಡುವುದಾಗಿ ಹೇಳುತ್ತಿರುವುದು ಚುನಾವಣೆ ಹತ್ತಿರ ಬಂದಾಗ ಬಿಜೆಪಿಯವರು ನಡೆಸುತ್ತಿರುವ ಕುತಂತ್ರ ಎಂದು ರಮಾನಾಥ ರೈ ಆಕ್ಷೇಪಿಸಿದರು.

ಗೋಷ್ಠಿಯಲ್ಲಿ ಶಶಿಧರ ಹೆಗ್ಡೆ, ಶಾಲೆಟ್ ಪಿಂಟೋ, ಶಾಹುಲ್ ಹಮೀದ್, ಅಪ್ಪಿ, ಗಣೇಶ್ ಪೂಜಾರಿ, ಉಮೇಶ್ ದಂಡಕೇರಿ, ಜಯಶೀಲ ಅಡ್ಯಂತಾಯ, ಬಿ.ಎಲ್. ಪದ್ಮನಾಭ, ಶಬೀರ್, ನಝೀರ್ ಉಪಸ್ಥಿತರಿದ್ದರು.

share
Next Story
X