ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ...: ದರ್ಶನ್ ಟ್ವೀಟ್

ಬೆಳಗಾವಿ, ಡಿ. 22: 'ಕ್ರಾಂತಿ' ಚಿತ್ರ ತಂಡ, ಡಿ. 18ರಂದು ಹೊಸಪೇಟೆ ಪಟ್ಟಣದಲ್ಲಿ ಆಯೋಜಿಸಿದ್ದ ಚಿತ್ರದ ಪ್ರಚಾರ ಸಮಾರಂಭದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ದರ್ಶನ್‌ರೆಡೆಗೆ ಚಪ್ಪಲಿ ತೂರಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಕನ್ನಡ ಚಿತ್ರ ರಂಗದ ಹಲವು, ನಟ-ನಟಿಯರು ಘಟನೆಯನ್ನು ಖಂಡಿಸಿದ್ದರು. ಇದೀಗ ನಟ ದರ್ಶನ್ ರೂಗುದೀಪ ಅವರೆಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ದರ್ಶನ್ , ''ಇಂಥ ಸಮಯದಲ್ಲಿ ನ್ಯಾಯದ ಪರ ನಿಂತ ಚಿತ್ರರಂಗದ ಗೆಳೆಯರು, ನಟರಿಗೆ ಧನ್ಯವಾದಗಳು'' ಎಂದು ಹೇಳಿದ್ದಾರೆ.
''ಈ ಸಮಯದಲ್ಲಿ ನನಗಿಂತಲೂ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ ಎಂಬ ಅರಿವು ನನಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೇ ಹೊರತು ಬಲಹೀನನನ್ನಾಗಿ ಮಾಡುವುದಿಲ್ಲ. ಅದಕ್ಕೆ ತಕ್ಕ ಹಲವು ಉದಾಹರಣೆಗಳು ನಮ್ಮ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಚಿತ್ರರಂಗದ ಗೆಳೆಯರು, ನಟರಿಗೆ ಧನ್ಯವಾದಗಳು''.
ಇದನ್ನೂ ಓದಿ: ತುಂಬಾ ಆಘಾತಕಾರಿಯಾಗಿದೆ: ದರ್ಶನ್ ಮೇಲಿನ ಚಪ್ಪಲಿ ಎಸೆತ ಖಂಡಿಸಿದ ನಟ ಸುದೀಪ್
''ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು. ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ. ಹಾಳು ಮಾಡೋಕೆ ನೂರು ಜನ ಇದ್ದರೆ, ಕಾಯೋಕೆ ನಮ್ಮ ಕೋಟ್ಯಂತರ ಅಭಿಮಾನಿಗಳಿರುತ್ತಾರೆ. ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ'' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ದರ್ಶನ್ ಅವರ ಮೇಲಿನ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ''ಅಭಿಮಾನಿ ಸಂಘಗಳು,ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ'' ಎಂದು ಬೇಸರ ವ್ಯಕ್ತಪಡಿಸಿದ್ದರು.
ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ pic.twitter.com/PI7ikiciij
— Darshan Thoogudeepa (@dasadarshan) December 21, 2022







