ಬೆಂಗಳೂರು: ಮಹಿಳೆ ಆತ್ಮಹತ್ಯೆ

ಬೆಂಗಳೂರು, ಡಿ.22: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಗುಂಟೆಯ ಡಿಫೆನ್ಸ್ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಹೊಳೆನರಸೀಪುರ ಮೂಲದ ಲಕ್ಷ್ಮೀದೇವಿ(42) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಆದರೂ ಗುಣಮುಖರಾಗಿರಲಿಲ್ಲ. ಇದರಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಧಾವಿಸಿ ಮನೆ ಬಾಗಿಲೊಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Next Story





