Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಿಡಿಪಿಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ:...

ಜಿಡಿಪಿಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ: ಸಂಸದ ನಳಿನ್ ಕುಮಾರ್‌ ಕಟೀಲ್

ದ.ಕ.ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆ

22 Dec 2022 7:56 PM IST
share
ಜಿಡಿಪಿಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ: ಸಂಸದ ನಳಿನ್ ಕುಮಾರ್‌ ಕಟೀಲ್
ದ.ಕ.ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆ

ಮಂಗಳೂರು: ಆರ್ಥಿಕ ಪ್ರಗತಿಯ ಅಳತೆಗೋಲಾದ ದೇಶಿಯ ಉತ್ಪಾದನೆ(ಜಿಡಿಪಿ)ಯಲ್ಲಿ ರಾಜ್ಯದಲ್ಲೇ ಮಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ಸಂಸದ ನಳಿನ್ ಕುಮಾರ್‌ಕಟೀಲ್ ಹೇಳಿದರು.

ನಗರದ ಕೊಟ್ಟಾರದಲ್ಲಿರುವ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ 3ನೇ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವ ಹುಬ್ಬಳ್ಳಿ ಅಥವಾ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಮೈಸೂರಿಗಿಂತಲೂ ಜಿಡಿಪಿಯಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿರುವುದಕ್ಕೆ ನಾಗರಿಕರು, ಉದ್ದಿಮೆದಾರರು, ಬ್ಯಾಂಕರುಗಳು, ಕಾರಣರಾಗಿದ್ದಾರೆ ಎಂದರು.

ಬ್ಯಾಂಕುಗಳ ಮೂಲಕ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿಗದಿತ ಗುರಿ ತಲುಪದ ಬ್ಯಾಂಕುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಆ ಬ್ಯಾಂಕುಗಳಲ್ಲಿ ಸರಕಾರದ ಹಣವಿದ್ದಲ್ಲಿ ಕೂಡಲೇ ಅದನ್ನು ಹಿಂದಕ್ಕೆ ಪಡೆದು ಇತರೆ ಬ್ಯಾಂಕುಗಳಲ್ಲಿ  ಠೇವಣಿ ಇರಿಸುವಂತೆ ಸಂಸದ ನಳಿನ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ, ತಲಾ ಆದಾಯದಲ್ಲೂ ಮಂಗಳೂರು ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿದೆ. ಕೈಗಾರಿಕೆಗಳು, ಉದ್ದಿಮೆಗಳು, ವಾಣಿಜ್ಯ ಚಟುವಟಿಕೆಗಳ ಸಹಿತ ವಿವಿಧ ಕಾರಣಗಳಿಂದ ಇದು ಸಾಧ್ಯವಾಗಿದೆ ಎಂದರು.

ವೇದಿಕೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಕುಮಾರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಜಿಎಂ ಪಿ.ಬಿಸ್ವಾಸ್, ನಬಾರ್ಡ್ ಡಿಡಿಎಂ ಸಂಗೀತಾ ಎಸ್. ಕರ್ತ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಎಂ.ಪಿ. ಉಪಸ್ಥಿತರಿದ್ದರು.

►ದ.ಕ.ಜಿಲ್ಲಾ ಲೀಡ್ ಬ್ಯಾಂಕ್ ಸಿದ್ಧಪಡಿಸಲಾಗದ ಸರಕಾರಿ ಸೌಲಭ್ಯಗಳ ಮಾಹಿತಿಯುಳ್ಳ ಗ್ಲಿಂಪ್ಸ್ ಆಫ್ ಗವಮೆಂಂಟ್ ಸ್ಪಾನ್ಸರ್ಡ್ ಸ್ಕಿಮ್ಸ್ ಎಂಬ ಹೊತ್ತಿಗೆಯನ್ನು ಸಂಸದರು ಬಿಡುಗಡೆಗೊಳಿಸಿದರು.

►ನಬಾರ್ಡ್‌ನ 2023-24ನೇ ಸಾಲಿನ ಪೊಟೇಶಿಯಲ್ ಲಿಂಕ್ಡ್ ಕ್ರೆಡಿಟ್ ಪ್ಲಾನ್ (ಪಿಎಲ್‌ಪಿ) ಪುಸ್ತಕವನ್ನು ಅನಾವರಣಗೊಳಿಸಲಾಯಿತು.

►ಪಿಎಂಇಜಿಪಿ (ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ)ಯ ಅನುಷ್ಠಾನದಲ್ಲಿ 2021-22ನೇ ಸಾಲಿನಲ್ಲಿ ಜಿಲ್ಲೆಯು ರಾಜ್ಯದಲ್ಲೇ ತೃತೀಯ ಸ್ಥಾನ ಪಡೆದಿದೆ. ಆ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಾಲ ನೀಡಿದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ಸ್ಟೇಟ್‌ಬ್ಯಾಂಕ್ ಆಫ್‌ಇಂಡಿಯಾದ ಪ್ರಮುಖರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

share
Next Story
X