Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಕ್ಕಲಿಗರ ಮೀಸಲಾತಿ ಶೇ.12ಕ್ಕೆ...

ಒಕ್ಕಲಿಗರ ಮೀಸಲಾತಿ ಶೇ.12ಕ್ಕೆ ಹೆಚ್ವಿಸಲು ಒಕ್ಕಲಿಗ ಸಚಿವರು, ಶಾಸಕರ ಅಗ್ರಹ: ಸಿಎಂಗೆ ಮನವಿ

23 Dec 2022 3:13 PM IST
share
ಒಕ್ಕಲಿಗರ ಮೀಸಲಾತಿ ಶೇ.12ಕ್ಕೆ ಹೆಚ್ವಿಸಲು ಒಕ್ಕಲಿಗ ಸಚಿವರು, ಶಾಸಕರ ಅಗ್ರಹ: ಸಿಎಂಗೆ ಮನವಿ

ಬೆಳಗಾವಿ, ಡಿ.23: ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಮೀಸಲಾತಿ ಪ್ರಮಾಣವನ್ನು ಶೇ.12ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರದಲ್ಲಿರುವ ಸಮುದಾಯಕ್ಕೆ ಸೇರಿದ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಶುಕ್ರವಾರ ಒತ್ತಾಯಿಸಿದ್ದಾರೆ.

ಇಲ್ಲಿನ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ಮುಖಂಡರು ಮನವಿ ಸಲ್ಲಿಸಿದರು. ಈ ವೇಳೆ  ಮುಖ್ಯಮಂತ್ರಿ, ಒಕ್ಕಲಿಗರ ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಹಿಂದೆ ಈ ಸಂಬಂಧ ಆದಿಚುಂಚನಗಿರಿ ಮಠದ ಶ್ರೀ‌ನಿರ್ಮಲಾನಂದನಾಥ ಸ್ವಾಮೀಜಿ ಕೂಡ ಮನವಿ‌ ಕೊಟ್ಟಿದ್ದಾರೆ. ಹಾಗೆಯೇ ಈಗಲೂ ಒಕ್ಕಲಿಗ ಸಚಿವರು, ಶಾಸಕರು ಮನವಿ ಮಾಡಿದ್ದಾರೆ. ಈ ಎಲ್ಲ ಮನವಿಗಳನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಸಚಿವರು ಪ್ರತಿಕ್ರಿಯೆ ನೀಡಿದರು.

ರಾಜ್ಯದ ಜನಸಂಖ್ಯೆಯಲ್ಲಿ ಶೇಕಡ 16ರಷ್ಟಿರುವ ಹಾಗೂ ವಿವಿಧ ಯೋಜನೆಗಳಿಂದಾಗಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಮೀಸಲಾತಿಯನ್ನು ಶೇಕಡ 12ಕ್ಕೆ ಹೆಚ್ಚಿಸಬೇಕು ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್.ಅಶ್ವತ್ಥ ನಾರಾಯಣ  ಮಾತನಾಡಿ, ನಗರೀಕರಣ ಹಾಗೂ ಕೈಗಾರಿಕೀಕರಣಕ್ಕಾಗಿ ಕೃಷಿಯನ್ನು ಒಕ್ಕಲಿಗರು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ದಕ್ಷಿಣ ಕರ್ನಾಟಕದಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಒಕ್ಕಲಿಗರ ಸಂಖ್ಯೆ ಹೆಚ್ಚುತ್ತಿದೆ. ಈಗಿರುವ 3ಎ ಪ್ರವರ್ಗವು ಶೇಕಡ 20ರಷ್ಟು ಜನಸಂಖ್ಯೆ ಇರುವ ಸಮುದಾಯವನ್ನು ಪ್ರತಿನಿಧಿಸುತ್ತಿದೆ. ಆದರೆ ಇದಕ್ಕೆ ನಿಗದಿಗಾಗಿರುವುದು ಶೇಕಡ 4ರಷ್ಟು ಮೀಸಲಾತಿ ಮಾತ್ರ. ಇದರಲ್ಲಿ ಒಕ್ಕಲಿಗರಿಗೆ ಸಿಗುತ್ತಿರುವುದು ಶೇಕಡ 3ರಷ್ಟು ಮಾತ್ರ ಎಂಬ ಬಗ್ಗೆ ಗಮನ ಸೆಳೆದರು.

ಒಕ್ಕಲಿಗ ಸಮುದಾಯದ ಉಪಜಾತಿಗಳಾದ ಬಂಟರು, ರೆಡ್ಡಿಗಳು ಮತ್ತು ಕೊಂಚಟ್ಟಿಗರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಲ್ಲ. ಇದರಿಂದ ಈ ಸಮುದಾಯಗಳಿಗೆ ಅನ್ಯಾಯವಾಗಿದೆ. ತಕ್ಷಣವೇ ಇದನ್ನು ಸರಿಪಡಿಸಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಒತ್ತಾಯಿಸಿದರು.

ಸಚಿವ ಗೋಪಾಲಯ್ಯ ಮಾತನಾಡಿ, ಒಕ್ಕಲಿಗ ಸಮುದಾಯವು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಹೀಗಾಗಿ ಸಮುದಾಯಕ್ಕೆ ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಹೆಚ್ಚಿನ ಪ್ರಮಾಣದಲ್ಲಿ ಸಿಗಬೇಕು ಎಂದರು.

ಸಚಿವರಾದ ಆರಗ ಜ್ಞಾನೇಂದ್ರ, ಡಾ.ಸುಧಾಕರ, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಕೃಷ್ಣಪ್ಪ, ಕೆ.ಜೆ.ಭೋಪಯ್ಯ, ಸುಕುಮಾರ ಶೆಟ್ಟಿ, ಡಾ.ರಾಜೇಶ ಗೌಡ, ಮಸಾಲೆ ಜಯರಾಂ, ರಾಜೇಶ ನಾಯ್ಕ, ತುಳಸಿ ಮುನಿರಾಜು, ಸತೀಶ ರೆಡ್ಡಿ, ಪ್ರಾಣೇಶ್, ವೈ.ಎ. ನಾರಾಯಣಸ್ವಾಮಿ, ಸೋಮಶೇಖರ ರೆಡ್ಡಿ, ಸಂಜೀವ ಮಠಂದೂರು, ಎಲ್ ನಾಗೇಂದ್ರ, ಭಾರತಿ ಶೆಟ್ಟಿ, ಅ.ದೇವೇಗೌಡ, ಪುಟ್ಟಣ್ಣ, ಚಿದಾನಂದ ಗೌಡ, ಎಸ್.ಆರ್.ವಿಶ್ವನಾಥ ಮತ್ತಿತರರು ಸಭೆಯಲ್ಲಿ ಇದ್ದರು.

share
Next Story
X