Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಸದಸ್ಯ...

ಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ಆಯ್ಕೆ

ಮತದಾನದಿಂದ ದೂರ ಉಳಿದ ಜೆಡಿಎಸ್

23 Dec 2022 4:06 PM IST
share
ಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ಆಯ್ಕೆ
ಮತದಾನದಿಂದ ದೂರ ಉಳಿದ ಜೆಡಿಎಸ್

ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ.23: ಪರಿಷತ್ತಿನ ಉಪ ಸಭಾಪತಿಯಾಗಿ ಎರಡನೆ ಬಾರಿಗೆ ಬಿಜೆಪಿ ಹಿರಿಯ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ಚುನಾಯಿತರಾದರು.

ಶುಕ್ರವಾರ ಪರಿಷತ್ ಸಮಾವೇಶಗೊಂಡಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು, ಉಪ ಸಭಾಪತಿ ಸ್ಥಾನದ ಚುನಾವಣೆ ಪ್ರಸ್ತಾವ ಕೈಗೆತ್ತಿಕೊಂಡರು.ಸಭಾನಾಯಕ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸದಸ್ಯರಾದ ಎಸ್.ರುದ್ರೇಗೌಡ, ಡಾ.ತಳವಾರ ಸಾಬಣ್ಣ, ಅರುಣ್ ಡಿ.ಎಸ್. ಅವರು, ಸದಸ್ಯ ಎಂ.ಕೆ.ಪ್ರಾಣೇಶ್ ಅವರನ್ನು ಉಪ ಸಭಾಪತಿಯಾಗಿ ಚುನಾಯಿಸಬೇಕು ಎಂದು ಸೂಚಿಸಿದರು.

ಆನಂತರ, ಆಡಳಿತ ಪಕ್ಷದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಸದಸ್ಯರಾದ ಪ್ರತಾಪ್ ಸಿಂಹನಾಯಕ, ಹೇಮಲತಾ ನಾಯಕ, ನವೀನ್ ಕೆ.ಎಸ್.ಅವರು ಉಪ ಸಭಾಪತಿ ಪ್ರಸ್ತಾವನೆಯನ್ನು ಅನುಮೋದಿಸಿದರು

ಇದಾದ ಬಳಿಕ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರನ್ನು ಚುನಾಯಿಸಬೇಕೆಂದು ಸೂಚಿಸಿದರು. ಈ ಪ್ರಸ್ತಾವವನ್ನು ಮಂಜುನಾಥ ಭಂಡಾರಿ ಅನುಮೋದಿಸಿದರು.

ಬಳಿಕ ಸಭಾಧ್ಯಕ್ಷರು, ಎಂ.ಕೆ.ಪ್ರಾಣೇಶ್ ಅವರ ಚುನಾವಣೆ ಪ್ರಸ್ತಾವ ಮತಕ್ಕೆ ಹಾಕಿದಾಗ 39 ಮತಗಳು ಪ್ರಾಣೇಶ್ ಅವರ ಪರವಾಗಿ ದೊರೆತವು. ಅದೇ ರೀತಿ, ಪ್ರಾಣೇಶ ವಿರುದ್ಧವಾಗಿ 26 ಮತಗಳು ಬಂದವು.ಆಗ ಸಭಾಪತಿ ಪ್ರಾಣೇಶ್ ಚುನಾಯಿತರಾಗಿದ್ದಾರೆ ಎಂದು ಪ್ರಕಟಿಸಿದರು.

ಬಳಿಕ, ಸಭಾನಾಯಕರು, ಆಡಳಿತದ ಪಕ್ಷದ ಮುಖ್ಯ ಸಚೇತಕ, ವಿಪಕ್ಷ ನಾಯಕರು, ಜೆಡಿಎಸ್ ನ ಭೋಜೇಗೌಡ ಅವರು ಪ್ರಾಣೇಶ್ ಅವರನ್ನು ಅಭಿನಂದಿಸಿ, ಉಪಸಭಾಪತಿ ಪೀಠಕ್ಕೆ ಸಂಪ್ರದಾಯದಂತೆ ಕರೆ ತಂದರು.

ಉಪ ಸಭಾಪತಿ ಅವರನ್ನು ಅಭಿನಂದಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಪ್ರಜಾಪ್ರಭುತ್ವದಲ್ಲಿ ಹಲವಾರು ಬಾರಿ ಪಕ್ಷಗಳ ನಿಲುವಿನ ಬಗ್ಗೆ ಮಾತನಾಡುತ್ತೇವೆ. ಸಾರ್ವಜನಿಕ ಹಿತಾಸಕ್ತಿ, ನಾಡಿನ ನೆಲ, ಜಲದ ಪ್ರಶ್ನೆ ಇರಬಹುದು.ಅಥವಾ ನಾಡಿನ ಜ್ವಲಂತ ಸಮಸ್ಯೆ ಗಳನ್ನು ಬಗೆಹರಿಸುವ ಸಂದರ್ಭದಲ್ಲಿ ನಾವು ಎಲ್ಲವನ್ನೂ ಮೀರಿ, ಎತ್ತರದಲ್ಲಿ ನಿಂತು, ಪರಿಹಾರವನ್ನು ಕಂಡುಕೊಳ್ಳುವುದು ಅಗತ್ಯ.ಎಲ್ಲರಿಗೂ ಇದು ಅನ್ವಯಿಸುತ್ತದೆ ಎಂದು ತಿಳಿಸಿದರು.

ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಸಭಾಪತಿ ಬಸವರಾಜ ಹೊರಟ್ಟಿ ಅವರು ಆಯ್ಕೆಯಾದ ಬಳಿಕ ಪಕ್ಷಕ್ಕೆ ಸ್ವತಃ ರಾಜೀನಾಮೆ ನೀಡಿದ್ದಾರೆ. ಆದರೆ,ಪ್ರಾಣೇಶ್ ಅವರು ನಡೆ ಗೊತ್ತಿಲ್ಲ. ಅವರು, ಉತ್ತಮವಾಗಿ ಕಾರ್ಯ ನಿರ್ವಹಿಸಿ ಉಪಸಭಾಪತಿ ಸ್ಥಾನದ ಘನತೆ ಗೌರವ ಹೆಚ್ಚಿಸಲಿ ಎಂದರು.

ಜೆಡಿಎಸ್ ತಟಸ್ಥ..!:ಸದನದಲ್ಲಿ ಬಿಜೆಪಿ 39, ಕಾಂಗ್ರೆಸ್ 26 ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿದರೆ, ಜೆಡಿಎಸ್ 8 ಹಾಗೂ ಒಬ್ಬರು ಪಕ್ಷೇತರ ಸದಸ್ಯರು ತಟಸ್ಥರಾಗಿದ್ದರು.

ನಿಯಮದಂತೆ ಕೆಲಸ ಮಾಡುವೆ: ‘ತಮ್ಮ ಪಕ್ಷದಲ್ಲಿ ಹಿರಿಯರು ಇದ್ದರೂ ನನ್ನ ಆಯ್ಕೆ ಕುರಿತು ಅಪಸ್ವರ ಎತ್ತಿಲ್ಲ. ಹೀಗಾಗಿ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಸದನದಲ್ಲಿ ನಿಯಮಾನುಸಾರ ಕೆಲಸ ಮಾಡುವೆ’

-ಎಂ.ಕೆ.ಪ್ರಾಣೇಶ್, ನೂತನ ಉಪ ಸಭಾಪತಿ

share
Next Story
X