Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಳಕೆಯಾಗದ ಸರಕಾರಿ ವಾಹನಗಳು ಗುಜರಿಗೆ:...

ಬಳಕೆಯಾಗದ ಸರಕಾರಿ ವಾಹನಗಳು ಗುಜರಿಗೆ: ಸಚಿವ ಮಾಧುಸ್ವಾಮಿ

23 Dec 2022 5:05 PM IST
share
ಬಳಕೆಯಾಗದ ಸರಕಾರಿ ವಾಹನಗಳು ಗುಜರಿಗೆ: ಸಚಿವ ಮಾಧುಸ್ವಾಮಿ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.23: ರಾಜ್ಯದಲ್ಲಿನ ಸರಕಾರಿ ಕಚೇರಿಗಳಲ್ಲಿ ಹಾಗೂ ಸಾರಿಗೆ ಇಲಾಖೆಗಳಲ್ಲಿ ಬಳಕೆಯಾಗದ ಹಳೆಯ ವಾಹನಗಳನ್ನು ಪರಿಶೀಲಿಸಿ, ಗುಜರಿ ಹಾಕುವ ಸಂಬಂಧ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಬಿ.ಹರ್ಷವರ್ಧನ್ ಗಮನ ಸೆಳೆದ ಸೂಚನೆಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಪರವಾಗಿ ಉತ್ತರಿಸಿದ ಅವರು, ಅಬಕಾರಿ ಇಲಾಖೆಯಲ್ಲಿ ಈಗಾಗಲೆ ಬಳಕೆಯಾಗದ ವಾಹನಗಳನ್ನು ಹರಾಜು ಹಾಗೂ ಗುಜರಿಗೆ ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನುಳಿದ ಇಲಾಖೆಗಳಲ್ಲಿಯೂ ಇದೇ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಷಯ ಪ್ರಸ್ತಾಪಿಸಿದ ಹರ್ಷವರ್ಧನ್, ಸರಕಾರಿ ಕಚೇರಿಗಳ ಆವರಣದಲ್ಲಿ 15-20 ವರ್ಷಗಳಿಂದ ಒಂದೆ ಕಡೆ ವಾಹನಗಳು ನಿಂತಿರುತ್ತವೆ. ಇದರಿಂದಾಗಿ, ಕಚೇರಿಗಳಿಗೆ ಬರುವಂತಹ ಸಾರ್ವಜನಿಕರ ವಾಹನಗಳನ್ನು ನಿಲುಗಡೆ ಮಾಡಲು ಸ್ಥಳದ ಆಭಾವ ಉಂಟಾಗುತ್ತಿದೆ.ಇಂತಹ ಬಳಕೆಯಾಗದ ವಾಹನಗಳನ್ನು ಗುಜರಿ ಹಾಕುವುದರಿಂದ ಸರಕಾರದ ಬೊಕ್ಕಸಕ್ಕೆ ಆದಾಯವು ಬರುತ್ತದೆ ಎಂದರು.

ಇದಕ್ಕೆ ದನಿಗೂಡಿಸಿದ ಸ್ಪೀಕರ್ ಕಾಗೇರಿ, ಸರಕಾರಿ ಕಚೇರಿಗಳ ಆವರಣದಲ್ಲಿ ಬಳಕೆಯಾಗದ ವಾಹನಗಳು ತುಕ್ಕು ಹಿಡಿಯುತ್ತಿವೆ. ಅಂತಹ ವಾಹನಗಳನ್ನು ವಿಲೇವಾರಿ ಮಾಡಲು ಮೊದಲು ಆರ್‍ಟಿಒ ಅಧಿಕಾರಿಗಳು ಮೌಲ್ಯಮಾಪನ ಮಾಡಬೇಕು, ಆನಂತರ ಅದನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಆದೇಶ ನೀಡಬೇಕು.ಆರ್‍ಟಿಒ ಅಧಿಕಾರಿಗಳು ವಾಹನಗಳನ್ನು ಹರಾಜು ಹಾಕಿದರೆ ಅದನ್ನು ಯಾರು ತೆಗೆದುಕೊಳ್ಳುತ್ತಿಲ್ಲ. ಪುರಾತನ ಯುದ್ಧ ಸ್ಮಾರಕಗಳ ರೀತಿಯಲ್ಲಿ ಆ ವಾಹನಗಳು ಸರಕಾರಿ ಕಚೇರಿಗಳ ಆವರಣದಲ್ಲಿ ಸ್ಮಾರಕಗಳಂತೆ ಉಳಿದುಕೊಳ್ಳುತ್ತಿವೆ ಎಂದರು.

ಈ ವೇಳೆ ಮಾತು ಮುಂದುವರಿಸಿದ ಹರ್ಷವರ್ಧನ್, ಶಾಸಕರ ಭವನದ ಆವರಣದಲ್ಲಿರುವ ಬಳಕೆಯಾಗದ ವಾಹನಗಳು ತಕ್ಷಣವೇ ವಿಲೇವಾರಿಯಾಗುತ್ತವೆ. ಆದರೆ, ಗ್ರಾಮೀಣ ಭಾಗದಲ್ಲಿ, ತಾಲೂಕು ಮಟ್ಟದಲ್ಲಿನ ಕಚೇರಿಗಳ ಆವರಣದಲ್ಲಿನ ವಾಹನಗಳು ವಿಲೇವಾರಿಯಾಗುವುದಿಲ್ಲ ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್, ಸರಕಾರಿ ಕಚೇರಿಗಳ ಜೊತೆಗೆ ಪೊಲೀಸ್ ಠಾಣೆಗಳ ಆವರಣದಲ್ಲಿಯೂ ವಾಹನಗಳು ಸಾಲು ಸಾಲು ನಿಂತಿರುತ್ತವೆ. ಆ ವಾಹನಗಳನ್ನು ತಂದು ರಸ್ತೆ ಬದಿಯಲ್ಲಿ ಶಾಶ್ವತವಾಗಿ ನಿಲುಗಡೆ ಮಾಡುತ್ತಾರೆ.ಇದರಿಂದಾಗಿ, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.ಆದುದರಿಂದ, ಇಂತಹ ವಾಹನಗಳನ್ನು ನಿಲ್ಲಿಸಲು ಎರಡು ಎಕರೆ ಜಾಗ ಗುರುತಿಸಿದರೆ ಒಳ್ಳೆಯದು ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಪೊಲೀಸ್ ಠಾಣೆಗಳ ಎದುರು ನಿಲ್ಲಿಸಿರುವ ವಾಹನಗಳಿಂದಲೆ ಸ್ಟೀರಿಯೋ ಸಿಸ್ಟಮ್ ಸೇರಿದಂತೆ ಇನ್ನಿತರ ಭಾಗಗಳನ್ನು ಕಳುವು ಮಾಡಲಾಗುತ್ತಿದೆ. ಹೊರವಲಯದಲ್ಲಿ ಹೋಗಿ ನಿಲ್ಲಿಸಿದರೆ ವಾಹನಗಳ ಎಂಜಿನ್ ಕೂಡ ಬಿಡದೆ ಕೊಂಡೊಯ್ಯುತ್ತಾರೆ ಎಂದರು. ಆಗ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಕೆ.ಜೆ.ಜಾರ್ಜ್, ಬೆಂಗಳೂರು ಹೊರವಲಯದಲ್ಲಿ 100 ಎಕರೆ ಜಾಗವನ್ನು ಗುರುತಿಸಿ, ಸ್ಕ್ರಾಪ್ ಯಾರ್ಡ್ ನಿರ್ಮಾಣ ಮಾಡಿ, ಸರಕಾರಿ ವಾಹನಗಳನ್ನು ಹರಾಜು ಹಾಕುವ ಬದಲು ಸ್ಕ್ರಾಪ್ ಮಾಡಿದರೆ ಸರಕಾರಕ್ಕೆ ಹೆಚ್ಚಿನ ಆದಾಯ ಬರುತ್ತದೆ ಎಂದರು.

share
Next Story
X