Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಇನ್ನು ಹೋಮ್ ಸ್ಟೇ,...

ಮಂಗಳೂರಿನಲ್ಲಿ ಇನ್ನು ಹೋಮ್ ಸ್ಟೇ, ಪೇಯಿಂಗ್ ಗೆಸ್ಟ್ ನಿಯಮ ಬಿಗಿ

23 Dec 2022 8:35 PM IST
share
ಮಂಗಳೂರಿನಲ್ಲಿ ಇನ್ನು ಹೋಮ್ ಸ್ಟೇ, ಪೇಯಿಂಗ್ ಗೆಸ್ಟ್ ನಿಯಮ ಬಿಗಿ

ಮಂಗಳೂರು: ಮಂಗಳೂರು (Mangaluru) ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ  ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಹಾಗೂ ಸಂಸ್ಥೆಯ ರಿಜಿಸ್ಟರ್ ಪುಸ್ತಕವನ್ನು ಕಡ್ಡಾಯವಾಗಿ ಪ್ರತೀ ವರ್ಷ ಪೊಲೀಸ್ ಆಯುಕ್ತರ ಕಚೇರಿಗೆ ಹಾಜರುಪಡಿಸಬೇಕು. ಅಲ್ಲದೆ ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು. ವಿದೇಶಿ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ 24 ಗಂಟೆಗಳೊಳಗೆ ಅವರ ಪೂರ್ಣ ಮಾಹಿತಿಯನ್ನು ಪಾಸ್‌ಪೋರ್ಟ್, ವೀಸಾದ ವಿವರ ಸಹಿತವಾಗಿ ನೀಡಬೇಕು. ಅವರು ವಾಸ್ತವ್ಯ ತೆರವಗೊಳಿಸಿದಾಗಲೂ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.

ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಅವುಗಳಲ್ಲಿ ಒಂದು ಕ್ಯಾಮರಾ ಮುಖ್ಯ ದ್ವಾರಕ್ಕೆ/ರಸ್ತೆಗೆ ಮುಖ ಮಾಡಿರುವಂತೆ ಅಳವಡಿಸಿರಬೇಕು. ಸಿಸಿ ಕ್ಯಾಮರಾಗಳ ಫೂಟೇಜ್‌ಗಳು ಕನಿಷ್ಠ 30 ದಿನಗಳವರೆಗೆ ವೀಕ್ಷಣೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಠಾಣಾಧಿಕಾರಿಗಳು ಕೇಳಿದಾಗ ಮಾಹಿತಿ ಸಲ್ಲಿಸಬೇಕು. ಅಪರಾಧದ ಕೃತ್ಯಗಳು, ಮಾದಕ ದ್ರವ್ಯ ಮತ್ತು ಅನೈತಿಕ ಹಾಗೂ ಇತರ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಮುಂಜಾಗ್ರತೆ  ವಹಿಸಬೇಕು. ಎಲ್ಲಾ ಪೇಯಿಂಗ್ ಗೆಸ್ಟ್‌ಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯ ಅತಿಥಿಗಳನ್ನು ಹೊರತುಪಡಿಸಿ ಉಳಿದ ಅತಿಥಿಗಳಿಗೆ ಅವರ ಮೂಲ ವಿಳಾಸಕ್ಕೆ ಸಂಬಂಧಿಸಿದ ಪೊಲೀಸ್ ಕಚೇರಿಯಿಂದ ಕಡ್ಡಾಯವಾಗಿ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಸಂಬಂಧಪಟ್ಟವರು ವಹಿಸಿಕೊಂಡು ಈ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

share
Next Story
X