Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದರ್ಶ ಸಮಾಜದಲ್ಲಿ ಮಹಿಳೆಯರು ಯಾವುದೇ...

ಆದರ್ಶ ಸಮಾಜದಲ್ಲಿ ಮಹಿಳೆಯರು ಯಾವುದೇ ಸಮಯದಲ್ಲಿ ಹೊರಗೆ ಹೋಗುವಂತಾಗಬೇಕು: ಕೇರಳ ಹೈಕೋರ್ಟ್

23 Dec 2022 8:35 PM IST
share
ಆದರ್ಶ ಸಮಾಜದಲ್ಲಿ ಮಹಿಳೆಯರು ಯಾವುದೇ ಸಮಯದಲ್ಲಿ ಹೊರಗೆ ಹೋಗುವಂತಾಗಬೇಕು: ಕೇರಳ ಹೈಕೋರ್ಟ್

ತಿರುವನಂತಪುರ, ಡಿ. 23: ಆದರ್ಶ ಸಮಾಜದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರು ಹಗಲು ಅಥವಾ ರಾತ್ರಿ ಯಾವುದೇ ಸಮಯದಲ್ಲಿ ಬೀದಿಯಲ್ಲಿ ನಡೆಯುವಂತಾಗಬೇಕು ಎಂದು ಕೇರಳ ಉಚ್ಚ ನ್ಯಾಯಾಲಯ(Kerala High Court) ಗುರುವಾರ ಹೇಳಿದೆ.

ಆದರೆ, ಇದು ಅಸ್ತಿತ್ವಕ್ಕೆ ಬರಬೇಕಾದರೆ, ಸಾಕಷ್ಟು ಭದ್ರತಾ ವ್ಯವಸ್ಥೆಯನ್ನು ಒದಗಿಸಬೇಕು ಎಂದು ಅದು ತಿಳಿಸಿದೆ.

ಹಾಸ್ಟೆಲ್ನಿಂದ ರಾತ್ರಿ 9.30ರ ಬಳಿಕ ತೆರಳುವುದಕ್ಕೆ ನಿರ್ಬಂಧ ವಿಧಿಸಿ ಉನ್ನತ  ಶಿಕ್ಷಣ ಇಲಾಖೆ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ಉಚ್ಚ ನ್ಯಾಯಾಲಯ ವಿಚಾರಣೆ ನಡೆಸಿತು. ಈ ನಿರ್ದೇಶನ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ದೂರುದಾರರು ಹೇಳಿದ್ದಾರೆ.

‘‘ಬಾಲಕರಿಗಿಂತ ಬಾಲಕಿಯರಿಗೆ ಹೆಚ್ಚು  ಸಾಂವಿಧಾನಿಕ ಹಕ್ಕುಗಳಿವೆ. ಈ ರೀತಿ ತಾರತಮ್ಯದ ನಿರ್ಬಂಧಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲ. ಹಾಸ್ಟೆಲ್ ಕಾರಾಗೃಹವಲ್ಲ’  ಎಂದು ನ್ಯಾಯಾಲಯ ಹೇಳಿದೆ.

ಸರಿಯಾದ ಕಾರಣಕ್ಕೆ ವಿದ್ಯಾರ್ಥಿನಿಯರು ನಿಗದಿತ ಸಮಯದ ನಂತರ ಹಾಸ್ಟೆಲ್ನಿಂದ ತೆರಳಲು ಬಯಸಿದರೆ ಅವರಿಗೆ ನಿರ್ಬಂಧ ವಿಧಿಸಬಾರದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ದೇವನ್ ರಾಮಚಂದ್ರನ್ (Devan Ramachandran)ಅಭಿಪ್ರಾಯಿಸಿದರು.

share
Next Story
X