ನಿಯಮಬಾಹಿರವಾಗಿ ಶಿಕ್ಷಕರ ನಿಯೋಜನೆ; ವರದಿ ಸಲ್ಲಿಸಲು ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು, ಡಿ.23: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ರದ್ದುಪಡಿಸಿ, ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ವರದಿಯನ್ನು ಸಲ್ಲಿಸುವಂತೆ ಜ್ಞಾಪನ ಪತ್ರ ಹೊರಡಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ಶಿಕ್ಷಕರನ್ನು ಕಾನೂನುಬಾಹಿರವಾಗಿ ನಿಯೋಜನೆ ಮಾಡಲಾಗುತ್ತಿದೆ. ಈ ಕುರಿತು ಇಲಾಖೆಗೆ ದೂರುಗಳು ಬಂದಿವೆ. ಆದುದರಿಂದ, ಇಲಾಖೆಯ ಎಲ್ಲ ಉಪನಿರ್ದೇಶಕರು ಕಾನೂನುಬಾಹಿರವಾಗಿ ಮಾಡಿರುವ ನಿಯೋಜನೆಗಳನ್ನು ರದ್ದುಪಡಿಸಬೇಕು. ಹಾಗೆಯೇ ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ವರದಿಯನ್ನೂ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಒಂದು ವೇಳೆ ಈ ಸೂಚನೆಯ ನಂತರವೂ ನಿಯಮಬಾಹಿರವಾಗಿ ನಿಯೋಜನೆಗಳು ಮುಂದುವರೆಸಿದ್ದಲ್ಲಿ, ಅಂತಹ ಜಿಲ್ಲಾ ಉಪನಿರ್ದೇಶಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Next Story