ದ.ಕ. ಜಿಲ್ಲೆಯಲ್ಲಿ ಡಿ.26ರಿಂದ 28ರ ವರೆಗೆ ಸರಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಡಿ.26ರಿಂದ 28ರವರೆಗೆ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಸರಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಮೂಡಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಅಂತರ್‌ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಆಗಮಿಸಿದ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರನ್ನು ಜಾಂಬೂರಿ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗಲಿರುವುದರಿಂದ ಮೂಡುಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲ್ವೆ ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. ಹಾಗಾಗಿ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಸೇವೆಯಲ್ಲಿ ಸಾರಿಗೆಗಳಲ್ಲಿ ಡಿ.26ರಿಂದ 28ರವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story