Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಪರಿಹಾರವು ಅಪಘಾತ ಸಂತ್ರಸ್ತರ...

ಆರ್ಥಿಕ ಪರಿಹಾರವು ಅಪಘಾತ ಸಂತ್ರಸ್ತರ ನೋವನ್ನು ಅಳಿಸಲಾರದು: ಸುಪ್ರೀಂ ಕೋರ್ಟ್

24 Dec 2022 10:33 PM IST
share
ಆರ್ಥಿಕ ಪರಿಹಾರವು ಅಪಘಾತ ಸಂತ್ರಸ್ತರ ನೋವನ್ನು ಅಳಿಸಲಾರದು: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಗಂಭೀರ ಅಪಘಾತಕ್ಕೆ ಒಳಗಾಗುವ ವ್ಯಕ್ತಿಗಳು ಅನುಭವಿಸುವ ನೋವು ಮತ್ತು ಸಂಕಟವನ್ನು ಯಾವುದೇ ಮೊತ್ತದ ಹಣ ಅಥವಾ ಇತರ ಭೌತಿಕ ಪರಿಹಾರವು ಹೋಗಲಾಡಿಸಲಾರದು, ಆದರೆ ಆರ್ಥಿಕ ಪರಿಹಾರವು ಜೀವನಕ್ಕೆ ಭದ್ರತೆ ನೀಡುತ್ತದೆ ಎಂದು ಸುಪ್ರೀಂ ಕೋರ್ಟ್(Supreme Court) ಹೇಳಿದೆ.

ನಿರ್ದಿಷ್ಟ ಅಂಗವೈಕಲ್ಯವನ್ನು ಗಣನೆಗೆ ತೆಗೆದುಕೊಂಡು ನ್ಯಾಯೋಚಿತ ಪರಿಹಾರವನ್ನು ಸಂತ್ರಸ್ತನಿಗೆ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ(Krishna Murari) ಮತ್ತು ಎಸ್. ರವೀಂದ್ರ ಭಟ್(S. Rabindra Bhatt) ಅವರನ್ನೊಳಗೊಂಡ ಪೀಠವು ಹೇಳಿತು.

ಗಂಭೀರ ಅಪಘಾತವೊಂದು ನಡೆದ ಬಳಿಕ ವ್ಯಕ್ತಿಯು ಅನುಭವಿಸುವ ನೋವು ಮತ್ತು ಸಂಕಟವನ್ನು ಯಾವುದೇ ಮೊತ್ತದ ಹಣ ಅಥವಾ ಭೌತಿಕ ವಸ್ತುಗಳು ಹೋಗಲಾಡಿಸಲಾರವು ಅಥವಾ ಕಳೆದು ಹೋಗಿರುವ ಪ್ರೀತಿ ಪಾತ್ರ ವ್ಯಕ್ತಿಯನ್ನು ಮರಳಿಸಲಾರದು. ಆದರೆ ಆರ್ಥಿಕ ಪರಿಹಾರದ ಮೂಲಕ ಸಮಾಜವು ಸಂತ್ರಸ್ತರ ಬದುಕುಗಳಲ್ಲಿ ಭರವಸೆ ತುಂಬಬಹುದು ಹಾಗೂ ಮುಂದಿನ ಜೀವನವನ್ನು ಅವರು ಎದುರಿಸುವಂತೆ ಮಾಡಬಹುದು’’ ಎಂದು ನ್ಯಾಯಾಲಯ ಹೇಳಿದೆ.

ಕರ್ನಾಟಕದ ಬೀದರ್ ನಲ್ಲಿ ಸರಕಾರಿ ಆಸ್ಪತ್ರೆಯೊಂದರ ನಿರ್ಮಾಣದ ವೇಳೆ ಗಾಯಗೊಂಡಿರುವ ಕಾರ್ಮಿಕ ಮಹಿಳೆಯೊಬ್ಬರಿಗೆ 9.30 ಲಕ್ಷ ರೂಪಾಯಿ ಪರಿಹಾರ ನೀಡಿದ ನ್ಯಾಯಾಲಯವು, ತನ್ನ ಈ ಅಭಿಪ್ರಾಯವನ್ನು ವ್ಯಕ್ತಿಪಡಿಸಿದೆ.

2015 ಜುಲೈ 22ರಂದು, ಅರ್ಜಿದಾರರ ತಲೆಯ ಮೇಲೆ ಸೆಂಟರಿಂಗ್ ಹಲಗೆಯೊಂದು ಬಿದ್ದಾಗ ಅವರು ಎರಡನೇ ಮಹಡಿಯಿಂದ ನೆಲ ಮಹಡಿಗೆ ಬಿದ್ದರು. ಅವರ ಬೆನ್ನು ಮೂಳೆಗೆ ಗಾಯವಾಗಿದೆ ಹಾಗೂ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ ಎಂಬುದಾಗಿ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ಹೇಳಿದ್ದರು.

ಅಪಘಾತದ ಬಳಿಕ ಅವರಿಗೆ ಕಾರ್ಮಿಕ ವೃತ್ತಿಯನ್ನು ಮುಂದುವರಿಸಲು ಅಸಾಧ್ಯವಾಯಿತು. ಆದರೆ, ಹೈಕೋರ್ಟ್ ಅವರಿಗೆ ಪರಿಹಾರವನ್ನು ನೀಡಲು ನಿರಾಕರಿಸಿತು.
‘‘ಈ ಪ್ರಕರಣದಲ್ಲಿ ಹೈಕೋರ್ಟ್ನ ತೀರ್ಪು ಕಾರ್ಯಸಾಧುವಲ್ಲ ಎಂಬ ಅಭಿಪ್ರಾಯ ನಮ್ಮದು’’ ಎಂದು ಸುಪ್ರೀಂ ಕೋರ್ಟ್ ಹೇಳಿತು.

share
Next Story
X