Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ...

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುವುದಾದರೆ ಇವರು ಯಾಕೆ ಇರಬೇಕು: ಡಿ‌.ಕೆ ಶಿವಕುಮಾರ್ ವಾಗ್ದಾಳಿ

25 Dec 2022 7:57 PM IST
share
ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುವುದಾದರೆ ಇವರು ಯಾಕೆ ಇರಬೇಕು: ಡಿ‌.ಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು, ಡಿ.25: ಬಸವರಾಜ ಬೊಮ್ಮಾಯಿ ತಾನು ಮುಖ್ಯಮಂತ್ರಿ ಎಂಬುದನ್ನು ಮರೆತಿದ್ದಾರೆ. ಸಿಎಂ ಆದವರು ಇಡೀ ರಾಜ್ಯಕ್ಕೆ ಸಿಎಂ ಆಗಿದ್ದಾರೆ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುವುದಾದರೆ ಇವರು ಯಾಕೆ ಇರಬೇಕು? ಎಂದು ಕೆಪಿಸಿಸಿ ರಾಜಾಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಅವರ 'ಕ್ರಿಯೆಗೆ ತಕ್ಕ ಪ್ರತಿಕ್ರಿಯೆ' ಎಂಬ ಹೇಳಿಕೆಯೆ ಮಂಗಳೂರಿನಲ್ಲಿ ನಡೆದಿರುವ ಮುಸ್ಲಿಮ್ ಯುವಕನ ಹತ್ಯೆಗೆ ಕಾರಣವೇ? ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರಿಗೂ ರಕ್ಷಣೆ ನೀಡಬೇಕಾಗಿರುವುದು ಅವರ ಕರ್ತವ್ಯ. ಯಾವ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಆಗಿದೆ. ಇವರು ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುವ ಹೇಳಿಕೆ ನೀಡಿದ್ದಾರೆ. ಸಂವಿಧಾನದ ಹೆಸರಲ್ಲಿ ಮಾಡಿರುವ ಪ್ರಮಾಣಕ್ಕೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಈ ಪರಿಸ್ಥಿತಿಯಿಂದ ರಾಜ್ಯಕ್ಕೆ ಬಂಡವಾಳ ಹೂಡಿಕೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ, ಅಭಿವೃದ್ಧಿ ಆಗುತ್ತಿಲ್ಲ ಎಂದರು.

ಆರ್ಥಿಕ ಸಂಕಷ್ಟ ಹೆಚ್ಚುತ್ತಿದ್ದು, ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ. ಇದಕ್ಕೆಲ್ಲ ಸಿಎಂ ಅವರೇ ಕಾರಣ. ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು ಸಮವಸ್ತ್ರ ತ್ಯಜಿಸಿ ಕೇಸರಿ ಬಟ್ಟೆ ಹಾಕಿಕೊಂಡು ನೈತಿಕ ಪೊಲೀಸ್ ಗಿರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಸಮರ್ಥಿಸಿಕೊಂಡು ಮುಖ್ಯಮಂತ್ರಿ ಬಹಳ ಬೇಜವಾಬ್ದಾರಿಯ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಇದು ರಾಜ್ಯಕ್ಕೆ ದೊಡ್ಡ ಅಪಮಾನ. ಇದನ್ನು ನಿಯಂತ್ರಿಸುವ ಸಾಮರ್ಥ್ಯವಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು. ಜನರ ಪ್ರಾಣ ತೆಗೆದುಕೊಳ್ಳಬಾರದು ಎಂದು ಅವರು ವಾಗ್ದಾಳಿ ನಡೆಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆ ಫೆಬ್ರವರಿ, ಮಾರ್ಚ್ ನಲ್ಲಿ ಕೋವಿಡ್ ಹೆಚ್ಚಾಗುತ್ತಿದೆ ಎಂಬ ಸಚಿವ ಸುಧಾಕರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇವರೇನು ಭವಿಷ್ಯ ಹೇಳುವವರಲ್ಲ. ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಕೋವಿಡ್ ಎಂದರು. ಆದರೆ ಯಾರಿಗೆ ಸೋಂಕು ತಗುಲಿ ಸತ್ತರು. ನಮ್ಮ ವಿರುದ್ಧ ಪ್ರಕರಣ ದಾಖಲಿಸಿ, ಕೇಸ್ ಹಾಕಿ ಪಾದಯಾತ್ರೆ ನಿಲ್ಲಿಸಿದ್ದರು. ಆಗ ದಿನನಿತ್ಯ ಸಾವಿರಾರು ಮಂದಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದರು.

ಈಗ ರಾಹುಲ್ ಗಾಂಧಿ  ಭಾರತ ಜೋಡೋ ಯಾತ್ರೆ ಮಾಡುತ್ತಿದ್ದು, ಅವರಿಗೆ ಸಿಗುತ್ತಿರುವ ಜನ ಬೆಂಬಲವನ್ನು ಸಹಿಸಲು ಬಿಜೆಪಿ ಅವರಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿ ನಾಯಕರ ಕಾರ್ಯಕ್ರಮ ಹೇಗೆ ನಡೆಯುತ್ತಿದೆ? ಅವರ ನಾಯಕರು ರಾಜ್ಯಕ್ಕೆ ಬರುತ್ತಿಲ್ಲವೇ? ಕಾರ್ಯಕ್ರಮ ಮಾಡುತ್ತಿಲ್ಲವೇ? ಮೊದಲು ಅವರ ಕಾರ್ಯಕ್ರಮ ನಿಲ್ಲಿಸಲಿ. ಸುಮ್ಮನೆ ಆರ್ಥಿಕತೆ ಹಾಳು ಮಾಡಿ, ನಿರುದ್ಯೋಗ ಹೆಚ್ಚಿಸುತ್ತಿದ್ದಾರೆ. ಜನರನ್ನು ಸುಮ್ಮನೆ ಹೆದರಿಸುತ್ತಾರೆ ಎಂದು ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ನಿಯಂತ್ರಿಸಲು ಈ ರೀತಿ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, 'ನಾವು ಬಸ್ ಯಾತ್ರೆ ಮಾಡಿಯೇ ಮಾಡುತ್ತೇವೆ. ನಮ್ಮ ಯಾತ್ರೆ ಪಾಂಚಜನ್ಯ 2.0 ಆಗಲಿದೆ. ನಾವು ಯಾವುದೇ ಕಾರಣಕ್ಕೂ ಯಾತ್ರೆ ನಿಲ್ಲಿಸುವುದಿಲ್ಲ. ಡಿ.30 ರಂದು ಕೃಷ್ಣಾ ನದಿ ನೀರು ವಿಚಾರವಾಗಿ ವಿಜಯಪುರದಲ್ಲಿ ಪ್ರತಿಭಟನೆ ಇದೆ. ಜ.2 ರಂದು ಮಹಾದಾಯಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಹೋರಾಟ ಮಾಡಲಾಗುವುದು. ಜ.8 ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.

ನಾವು ಬೆಳಗಾವಿಯಿಂದ ಬಸ್ ಯಾತ್ರೆ ಮಾಡುತ್ತೇವೆ. ಇದನ್ನು ಯಾರಿಂದಲೂ ನಿಲಿಸಲು ಸಾಧ್ಯವಿಲ್ಲ. ನಿಲ್ಲಿಸಿದರೆ, ನಿಲ್ಲಿಸಲಿ. ಜನ ಇದ್ದಾರೆ. ಅವರ ಮುಂದೆ ಹೋಗುತ್ತೇವೆ. ಇವರು ಮಾಡಿರುವ ಅಕ್ರಮ, ಅನ್ಯಾಯ, ಲೂಟಿಯನ್ನು ಜನ ನೋಡಿದ್ದಾರೆ. ಅದನ್ನು ಅವರ ಮುಂದೆ ಇಡುತ್ತೇವೆ. ನಿನ್ನೆ ಕೆಂಪಣ್ಣ ಅವರನ್ನು ಬಂಧಿಸಿದ್ದಾರೆ.  ನಾನು ಕೂಡ ಯತ್ನಾಳ್ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ಇದುವರೆಗೂ ನನಗೆ ನೊಟೀಸ್ ಬಂದಿಲ್ಲ. ಆದರೆ ಕೆಂಪಣ್ಣ ಅವರ ವಿಚಾರದಲ್ಲಿ ಸತ್ಯ ಹೇಳಿದ್ದಕ್ಕೆ ವಾರೆಂಟ್ ಹೊರಡಿಸಿ ಬಂಧಿಸಿದ್ದಾರೆ. ರಾಜ್ಯದ ಗುತ್ತಿಗೆದಾರರು ಈ ವಿಚಾರದಲ್ಲಿ ಜಾಗರೂಕರಾಗಿರಿ. ಇದು ಕೇವಲ ಕೆಂಪಣ್ಣ ಒಬ್ಬರ ಮೇಲಿನ ದೌರ್ಜನ್ಯ ಅಲ್ಲ. ಗುತ್ತಿಗೆದಾರರಿಗೆ ದಿನನಿತ್ಯ ಆಗುತ್ತಿರುವ ಕಿರುಕುಳ. ಈ ಸರಕಾರವನ್ನು ಕಿತ್ತೊಗೆಯಲು ಭ್ರಷ್ಟಾಚಾರದ ಮಾಹಿತಿ ಒದಗಿಸಿಕೊಡಬೇಕು ಎಂದು ಶಿವಕುಮಾರ್ ಹೇಳಿದರು.

ಭ್ರಷ್ಟಾಚಾರ ವಿಚಾರವಾಗಿ ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ ಹಾಗೂ ಶ್ರೀನಿವಾಸ್ ಪ್ರಸಾದ್ ನೀಡಿದ ಹೇಳಿಕೆ ವಿಚಾರವಾಗಿ ಅವರಿಗೆ ಯಾಕೆ ನೊಟೀಸ್ ನೀಡಿಲ್ಲ. ಚುನಾವಣೆಯಲ್ಲಿ 15 ಕೋಟಿ ರೂ.ನೀಡಲಾಗಿದೆ, ಉಪಕುಲಪತಿಗಳ ಹುದ್ದೆಗೆ 5-6 ಕೋಟಿ ರೂ.ನೀಡಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಯಾಕೆ ವಿಚಾರಣೆ ಇಲ್ಲ? ಇದು ಹಿರಿಯ ಹಾಗೂ ಪ್ರಜ್ಞಾವಂತ ಸಂಸದರ ಹೇಳಿಕೆಯಾಗಿದೆ. ಇದನ್ನು ಲೋಕಾಯುಕ್ತ, ಈ.ಡಿ, ಐಟಿ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಬೇಕು. ತನಿಖೆ ಮಾಡಬೇಕು. ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

share
Next Story
X