ಜಲೀಲ್ ಹತ್ಯೆ ಪ್ರಕರಣದ ಪಾರದರ್ಶಕ ತನಿಖೆ: ಪೊಲೀಸ್ ಆಯುಕ್ತ ಶಶಿಕುಮಾರ್

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಶೀಘ್ರದಲ್ಲೇ ಆರೋಪಿಗಳನ್ನು ಕಸ್ಟಡಿಗೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಪ್ರಕರಣವನ್ನು ಭೇದಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸುರತ್ಕಲ್ ಸೂಕ್ಷ್ಮ ಪ್ರದೇಶವಾಗಿದ್ದು, ಯಾವುದೇ ರೀತಿಯಲ್ಲೂ ಕಾನೂನು ಸುವ್ಯವಸ್ಥೆ ಹಾಳಗಬಾರದೆಂಬ ಕಾರಣಕ್ಕೆ ಸುರತ್ಕಲ್, ಪಣಂಬೂರ್, ಕಾವೂರು ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144ಅಡಿ ನಿಶೇಧಾಜ್ಞೆ ವಿಧಿಸಿ ಆದೇಶಿಸಲಾಗಿದೆ.
Next Story