Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾನೂನು ವಿವಿ ಕುಲಪತಿ ನೇಮಕ: ಸರಕಾರದ...

ಕಾನೂನು ವಿವಿ ಕುಲಪತಿ ನೇಮಕ: ಸರಕಾರದ ಜೊತೆ ಸಮಾಲೋಚಿಸದ ರಾಜ್ಯಪಾಲ?

ಜಿ.ಮಹಾಂತೇಶ್ಜಿ.ಮಹಾಂತೇಶ್26 Dec 2022 8:39 AM IST
share
ಕಾನೂನು ವಿವಿ ಕುಲಪತಿ ನೇಮಕ: ಸರಕಾರದ ಜೊತೆ ಸಮಾಲೋಚಿಸದ ರಾಜ್ಯಪಾಲ?

ಬೆಂಗಳೂರು: ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ ನೇಮಕ ಮಾಡುವ ಸಂಬಂಧ ಕಾನೂನು ಮತ್ತು ಸಂಸದೀಯ ಸಚಿವರು ಮತ್ತು ರಾಜ್ಯ ಸರಕಾರವು ಮಾಡಿದ್ದ ಶಿಫಾರಸನ್ನು ಬದಿಗಿರಿಸಿದ್ದ ರಾಜ್ಯಪಾಲರು ಸರಕಾರವು ಶಿಫಾರಸು ಮಾಡದೇ ಇದ್ದ ಅಭ್ಯರ್ಥಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದರು ಎಂಬುದು ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.

 ಕುಲಪತಿಗಳ ನೇಮಕಕ್ಕೆ 6-7 ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬ ಗುರುತರವಾದ ಆರೋಪವನ್ನು ಬಿಜೆಪಿ ಸಂಸದ ಪ್ರತಾಪಸಿಂಹ ಅವರು ಆಡಿದ್ದ ಮಾತುಗಳು ವಿಶ್ವವಿದ್ಯಾನಿಲಯ ಮತ್ತು ಶೈಕ್ಷಣಿಕ ವಲಯದಲ್ಲಿ ಹೆಚ್ಚು ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ಕುಲಪತಿ ಹುದ್ದೆಗೆ ರಾಜ್ಯ ಸರಕಾರ ಮಾಡಿದ್ದ ಶಿಫಾರಸನ್ನು ರಾಜ್ಯಪಾಲರು ಬದಿಗಿರಿಸಿರುವುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ ''the-file.in''ಗೆ ಕೆಲವು ದಾಖಲೆಗಳು ಲಭ್ಯವಾಗಿವೆ.

ಕುಲಪತಿ ಹುದ್ದೆಗೆ ನೇಮಕ ಮಾಡುವ ಸಂದರ್ಭದಲ್ಲಿ ರಾಜ್ಯ ಸರಕಾರದ ಸಮಾಲೋಚನೆ ನಡೆಸಬೇಕು ಎಂಬ ಅಧಿನಿಯಮವಿದ್ದರೂ ಶೋಧನಾ ಸಮಿತಿಯು ಮಾಡಿದ್ದ ಆಯ್ಕೆಪಟ್ಟಿಯಲ್ಲಿ ರಾಜ್ಯ ಸರಕಾರವು ಮಾಡಿದ್ದ ಶಿಫಾರಸನ್ನು ರಾಜ್ಯಪಾಲರು ಪುರಸ್ಕರಿಸದಿರುವುದೂ ಚರ್ಚೆಗೆ ಗ್ರಾಸವಾಗಿದೆ.

ಭೋಪಾಲ್‌ನಲ್ಲಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ಕುಲಪತಿ ಡಾ.ವಿ.ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ರಚಿತವಾಗಿದ್ದ ಶೋಧನಾ ಸಮಿತಿಯು ಅಶೋಕ್ ರಾಮಪ್ಪಪಾಟೀಲ್, ಡಾ.ಬಸವರಾಜು ಸಿ, ಪ್ರೊ.ನಂದಿಮಠ ಓಂಪ್ರಕಾಶ್ ವೀರಯ್ಯ ಅವರನ್ನೊಳಗೊಂಡ ಆಯ್ಕೆಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿತ್ತು.

 ಈ ಪೈಕಿ ಆರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ತತ್ವದಡಿಯಲ್ಲಿ ಕಾನೂನು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪ್ರೊ.ನಂದಿಮಠ ಓಂಪ್ರಕಾಶ್ ವೀರಯ್ಯ ಅವರನ್ನು ಕುಲಪತಿ ಹುದ್ದೆಗೆ ಶಿಫಾರಸು ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಅನುಮೋದಿಸಿದ್ದರು ಎಂಬುದು ದಾಖಲೆಯಿಂದ (NO LAW 55 KLM 2022) ತಿಳಿದು ಬಂದಿದೆ.

 ಆದರೆ ರಾಜ್ಯಪಾಲರು ಪ್ರೊ. ನಂದಿಮಠ ಓಂಪ್ರಕಾಶ್ ವೀರಯ್ಯ ಅವರ ಬದಲಿಗೆ ಡಾ.ಸಿ.ಬಸವರಾಜು ಎಂಬವರನ್ನು ನೇಮಕಗೊಳಿಸಿದ್ದರು.

ಕುಲಪತಿ ಹುದ್ದೆಗೆ ನೇಮಕ ಮಾಡುವಾಗ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಅರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸಬೇಕು. ಇದನ್ನು ರಾಜ್ಯ ಸರಕಾರದೊಂದಿಗೆ ಸಮಾಲೋಚನೆ ಮತ್ತು ಒಪ್ಪಿಗೆಯನ್ನೂ ಪಡೆಯಬೇಕು. ಆದರೆ ಕಾನೂನು ವಿಶ್ವವಿದ್ಯಾನಿಲಯ ಕುಲಪತಿ ಹುದ್ದೆಗೆ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ ಈ ಪ್ರಕ್ರಿಯೆಗಳು ನಡೆದಿಲ್ಲ ಎಂಬುದು ಲಭ್ಯವಿರುವ ದಾಖಲೆಯಿಂದ ತಿಳಿದು ಬಂದಿದೆ.

ಪ್ರೊ.ಡಾ.ಜಿ.ಆರ್.ಜಗದೀಶ್, ಪ್ರೊ.ಎಸ್.ಯು.ಕೆ.ಪಾಟೀಲ್, ಪ್ರೊ.ಬಿ.ಎಸ್. ರೆಡ್ಡಿ, ಡಾ.ರಮೇಶ್, ಶರತ್ ಬಾಬು, ಡಾ.ಶಿವಾನಂದ ಎಚ್, ಪ್ರೊ.ವೆಂಕಟಚಲಾ ಜಿ.ಹೆಗ್ಡೆ ಸಹಿತ ಒಟ್ಟು 10 ಮಂದಿ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X