Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಕೊಟ್ಟಾಯಂನಲ್ಲಿ ವ್ಯಾಪಿಸಿದ ಪಕ್ಷಿ...

ಕೇರಳದ ಕೊಟ್ಟಾಯಂನಲ್ಲಿ ವ್ಯಾಪಿಸಿದ ಪಕ್ಷಿ ಜ್ವರ: 6,000ಕ್ಕೂ ಹೆಚ್ಚು ಪಕ್ಷಿಗಳ ನಾಶ

26 Dec 2022 2:46 PM IST
share
ಕೇರಳದ ಕೊಟ್ಟಾಯಂನಲ್ಲಿ ವ್ಯಾಪಿಸಿದ ಪಕ್ಷಿ ಜ್ವರ: 6,000ಕ್ಕೂ ಹೆಚ್ಚು ಪಕ್ಷಿಗಳ ನಾಶ

ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಪಕ್ಷಿ ಜ್ವರ ಹರಡಿರುವುದು ದೃಢಪಟ್ಟಿದ್ದು, ಈ ಜಿಲ್ಲೆಯ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 6,017 ಪಕ್ಷಿಗಳನ್ನು ನಾಶ ಪಡಿಸಲಾಗಿದೆ. ಈ ಪೈಕಿ ಬಾತುಕೋಳಿಗಳೇ ಹೆಚ್ಚಿವೆ ಎಂದು PTI ವರದಿ ಮಾಡಿದೆ. ಈ ನಾಶವು ವೆಚೂರ್, ನೀಂದೂರ್ ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಗಳಿಂದ ವರದಿಯಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೆಚೂರ್ ಪಂಚಾಯಿತಿ ವ್ಯಾಪ್ತಿಯಲ್ಲಿ 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರ್ ಪಂಚಾಯಿತಿ ವ್ಯಾಪ್ತಿಯಲ್ಲಿ 2,753 ಬಾತುಕೋಳಿಗಳು ಹಾಗೂ ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ 2,975 ಬಾತುಕೋಳಿಗಳನ್ನು ನಾಶಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ನಡುವೆ, ಕೇರಳದಲ್ಲಿ ಪಕ್ಷಿ ಜ್ವರ ಹರಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ರಾಜ್ಯದಿಂದ ಶೀತಲೀಕರಿಸಿದ ಕೋಳಿ ಮಾಂಸವನ್ನು ಆಮದು ಮಾಡಿಕೊಳ್ಳುವುದಕ್ಕೆ ಲಕ್ಷದ್ವೀಪ ಆಡಳಿತ ತಾತ್ಕಾಲಿಕ ನಿಷೇಧ ಹೇರಿದೆ. ಇತ್ತೀಚಿನ ದಿನಗಳಲ್ಲಿ ಪಕ್ಷಿ ಜ್ವರದಿಂದ ಕೇರಳದಲ್ಲಿ ಪಕ್ಷಿಗಳನ್ನು ದೊಡ್ಡ ಸಂಖ್ಯೆಯಲ್ಲಿ ನಾಶಗೊಳಿಸಿರುವ ಎರಡನೆ ನಿದರ್ಶನ ಇದಾಗಿದೆ. 

ಇದಕ್ಕೂ ಮುನ್ನ ಅಕ್ಟೋಬರ್ ತಿಂಗಳಲ್ಲಿ ಹರಿಪಾದ್ ಪ್ರದೇಶದಲ್ಲಿ ಹಕ್ಕಿ ಜ್ವರ ಹರಡಿದ್ದರಿಂದ ಅಲಪ್ಪುಳ ಜಿಲ್ಲಾಡಳಿತವು 20,000 ಪಕ್ಷಿಗಳನ್ನು ನಾಶಗೊಳಿಸಿತ್ತು. ಪಕ್ಷಿ ಜ್ವರ ಹರಡಿದ್ದರಿಂದ ಹರಿಪಾದ್ ಪ್ರದೇಶದ ರೈತರು ಸುಮಾರು 1500 ಬಾತುಕೋಳಿಗಳನ್ನು ಕಳೆದುಕೊಂಡಿದ್ದರಿಂದಾಗಿ ಜಿಲ್ಲಾಡಳಿತ ಇಂತಹ ಕ್ರಮಕ್ಕೆ ಮುಂದಾಗಿತ್ತು.

ನವೆಂಬರ್ ತಿಂಗಳಲ್ಲಿ ಪಶು ಸಂಗೋಪನೆ ಇಲಾಖೆಯ ಕ್ಷಿಪ್ರ ಸ್ಪಂದನ ತಂಡವು ಪಕ್ಷಿ ಜ್ವರದಿಂದ ಬಾಧಿತವಾಗಿದ್ದ ಚೆರುತ್ತನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 6,000 ಪಕ್ಷಿಗಳನ್ನು ನಾಶಗೊಳಿಸಿತ್ತು. ಬಾತುಕೋಳಿ ಸೇರಿದಂತೆ ಹತ್ತು ಬಗೆಯ ಪಕ್ಷಿಗಳನ್ನು ವೈರಸ್ ತೀವ್ರತೆ ಹೊಂದಿದ್ದ ಪ್ರದೇಶದ ಒಂದು ಕಿಮೀ ಸುತ್ತಳತೆ ವ್ಯಾಪ್ತಿಯಲ್ಲಿ ನಾಶಗೊಳಿಸಲಾಗಿತ್ತು ಎಂದು ವರದಿಯಾಗಿತ್ತು.

ಪಕ್ಷಿ ಜ್ವರ ಅಥವಾ ಏವಿಯನ್ ಇನ್‌ಫ್ಲುಯೆಂಝಾ ತೀವ್ರ ಸ್ವರೂಪದ ಸೋಂಕು ಹೊಂದಿರುವ ಪ್ರಾಣಿಜನ್ಯ ರೋಗವಾಗಿದ್ದು, ಏವಿಯನ್ ಇನ್‌ಫ್ಲುಯೆಂಝಾ ವೈರಸ್ ಸೋಂಕಿನಿಂದ ಈ ರೋಗ ಹರಡುತ್ತದೆ. ಏವಿಯನ್ ಇನ್‌ಫ್ಲುಯೆಂಝಾ (H5N1) ಅಥವಾ H5N8 ಹಲವಾರು ಪ್ರಭೇದದ ತಳಿಯೊಂದಿಗೆ ಲಭ್ಯವಿದ್ದರೂ, ಅದನ್ನು ಸಾಮಾನ್ಯವಾಗಿ ಪಕ್ಷಿ ಜ್ವರ ಎಂತಲೇ ಕರೆಯಲಾಗುತ್ತದೆ. ಈ ಸೋಂಕು ಪಕ್ಷಿಗಳ ವಿಸರ್ಜನೆ, ಸ್ರವಿಸುವಿಕೆ ಮತ್ತು ಎಂಜಲಿನ ಮೂಲಕ ಹರಡುತ್ತದೆ.

share
Next Story
X