ಕೋವಿಡ್ | ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ: ಸಿಎಂ ಬೊಮ್ಮಾಯಿ
ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ. 26: ‘ಕೋವಿಡ್ ಸೋಂಕಿನಿಂದ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಇಲ್ಲಿನ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು,ಐಎ¯ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯಗಳ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ, ಹಂತಹಂತವಾಗಿ ನಿಯಮಗಳನ್ನು ಜಾರಿ ತರಲಾಗುವುದು ಎಂದು ಹೇಳಿದರು.
ಹೊಸ ವರ್ಷ ಆಚರಣೆ: ಪ್ರತಿ ಬಾರಿಯಂತೆ ಈ ವರ್ಷವೂ ಹೊಸ ವರ್ಷಕ್ಕೆ ಸಂಬಂಧಿಸಿದಂತೆ ನಿಯಮಗಳಿದ್ದು, ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೇರಿಸಲಾಗುವುದು. ಜನಸಾಮಾನ್ಯರ ದೈನಂದಿನ ಚಟುವಟಿಕೆ, ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಜಾರಿ ಮಾಡಲಾಗುವುದು ಎಂದರು.
ಅಧಿವೇಶನ ಫಲಪ್ರದ: ಬೆಳಗಾವಿಯಲ್ಲಿನ ಅಧಿವೇಶನ ಫಲಪ್ರದ ಹಾಗೂ ಅರ್ಥಪೂರ್ಣವಾಗಬೇಕೆಂಬುದು ಸರಕಾರದ ಉದ್ದೇಶ. ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತುಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು. ವಿರೋಧಪಕ್ಷಗಳು ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಿವೆ. ಯಾವ ವಿಚಾರವೇ ಆಗಲಿ ಚರ್ಚಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಹೇಳಿದರು.