Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಡ್ಸೆಯನ್ನು ಆರಾಧಿಸುವವರು...

ಗೋಡ್ಸೆಯನ್ನು ಆರಾಧಿಸುವವರು ದೇಶದ್ರೋಹಿಗಳು: ಯು.ಟಿ.ಖಾದರ್

27 Dec 2022 11:52 PM IST
share
ಗೋಡ್ಸೆಯನ್ನು ಆರಾಧಿಸುವವರು ದೇಶದ್ರೋಹಿಗಳು: ಯು.ಟಿ.ಖಾದರ್

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.27: ಸಂವಿಧಾನವನ್ನು ಒಪ್ಪದವರು, ಗೋಡ್ಸೆಯನ್ನು ಆರಾಧಿಸುವವರು ದೇಶದ್ರೋಹಿಗಳು ಎಂದು ವಿಧಾನಸಭೆಯ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಭಯೋತ್ಪಾದನೆ ಕುರಿತು ಬಿಜೆಪಿ ಸದಸ್ಯ ಸಿ.ಟಿ.ರವಿ ಪ್ರಸ್ತಾಪಿಸಿದ ವಿಷಯದ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿದರು.

ಭಯೋತ್ಪಾದಕರನ್ನು ಯಾವುದೇ ಧರ್ಮದ ಆಧಾರದಲ್ಲಿ ಕಾಣಬಾರದು. ಭಯೋತ್ಪಾದಕ ಕೃತ್ಯ ನಮ್ಮವರು ಮಾಡಿದರೆ ಸರಿ, ಬೇರೆಯವರು ಮಾಡಿದರೆ ತಪ್ಪು ಎಂಬ ಮನಸ್ಥಿಯೇ ಆತಂಕಕಾರಿ. ಕಂದಹಾರ್‌ಗೆ ಮೂವರು ಭಯೋತ್ಪಾದಕರನ್ನು ವಿಮಾನದಲ್ಲಿ ಕೇಂದ್ರ ಸಚಿವರೊಬ್ಬರು ಹೋಗಿ ಬಿಟ್ಟು ಬಂದಿದ್ದು ನಮ್ಮ ಕಣ್ಣ ಮುಂದಿದೆ. ನಂತರ ಅವರಿಂದಾಗಿಯೇ ಸಂಸತ್‌ನ ಮೇಲೆ ದಾಳಿ, ಮುಂಬಯಿ ಮೇಲಿನ ದಾಳಿ, ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿ ನಡೆದದ್ದು ಗೊತ್ತಿದೆ ಎಂದು ಅವರು ಹೇಳಿದರು.

ಭಾರತದ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳು, ಭದ್ರತೆ, ಗುಪ್ತಚರ ಎಲ್ಲ ಇದ್ದರೂ 200 ಕೆ.ಜಿ. ಸ್ಫೋಟಕ ಆರ್‌ಡಿಎಕ್ಸ್ ಹೇಗೆ ಬಂತು ಎನ್ನುವುದು ಈವರೆಗೂ ದೇಶದ ಜನತೆಗೆ ಗೊತ್ತಾಗಿಲ್ಲ. ಪ್ರತ್ಯೇಕವಾದಿಗಳಿಗೆ ಬೆಂಬಲ ನೀಡಿದ ಮೆಹಬೂಬ ಮುಫ್ತಿ ಜೊತೆ ಕಾಶ್ಮೀರದಲ್ಲಿ ಸರಕಾರ ಮಾಡಿದವರು, ತಮ್ಮನ್ನು ದೇಶಪ್ರೇಮಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಖಾದರ್ ವಾಗ್ದಾಳಿ ನಡೆಸಿದರು.

ಸಂಜೋತಾ ಎಕ್ಸ್‌ಪ್ರೆಸ್, ಮಕ್ಕಾ ಮಸೀದಿ, ಮಾಲೆಗಾಂವ್ ಸ್ಫೋಟ ಪ್ರಕರಣ ನಮ್ಮ ಮುಂದಿವೆ. ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಗೆ ಟಿಕೆಟ್ ಕೊಟ್ಟು ಸಂಸದರನ್ನಾಗಿ ಮಾಡಿದವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದರೆ ಸರಕಾರಕ್ಕೆ, ಪೊಲೀಸರಿಗೆ ಮಾಹಿತಿಯೇ ಇಲ್ಲ. ಅದೃಷ್ಟವಶಾತ್ ಆ ಕುಕ್ಕರ್ ರಿಕ್ಷಾದಲ್ಲಿ ಸ್ಫೋಟಗೊಂಡಿತು. ಒಂದು ವೇಳೆ ರೈಲ್ವೆ ನಿಲ್ದಾಣದಲ್ಲಿ ಆಗಿದ್ದರೆ ಪರಿಸ್ಥಿತಿಯನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಖಾದರ್ ಹೇಳಿದರು.

ಆದುದರಿಂದ, ನಾವೆಲ್ಲರೂ ಒಂದಾಗಿ ದೇಶ, ಸಮಾಜ ವನ್ನು ಕಾಪಾಡುವ ಕೆಲಸಕ್ಕೆ ಕೈ ಜೋಡಿಸಬೇಕು. ಯಾವುದೇ ಧರ್ಮ ಮತ್ತೊಂದು ಧರ್ಮಕ್ಕೆ ಅಪಚಾರ ಮಾಡಲು ಪ್ರೇರೇಪಿಸುವುದಿಲ್ಲ. ಎಲ್ಲ ಧರ್ಮಗಳು, ಧರ್ಮ ಗ್ರಂಥಗಳು ಮಾನವ ಒಳಿತಿಗಾಗಿಯೆ ಇದೆ ಎಂದು ಅವರು ಹೇಳಿದರು.

share
Next Story
X