ಹನೂರು: ವ್ಯಕ್ತಿಯೊಬ್ಬರ ಮೃತದೇಹ ಪತ್ತೆ; ಕೊಲೆ ಶಂಕೆ

ಹನೂರು, ಡಿ.28: ತಾಲೂಕಿನ ಹಲಗುಮೂಲೆ ಯಡಹಳ್ಳಿ ದೊಡ್ಡಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಅಲಗುಮೂಲೆ ಗ್ರಾಮದ ಕುಮಾರ್ (50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story





