Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ: ರೆಡ್‌ಕ್ರಾಸ್‌ನಿಂದ ಬೀಚ್...

ಮಲ್ಪೆ: ರೆಡ್‌ಕ್ರಾಸ್‌ನಿಂದ ಬೀಚ್ ಸ್ವಚ್ಛತಾ ಅಭಿಯಾನ

28 Dec 2022 9:07 PM IST
share
ಮಲ್ಪೆ: ರೆಡ್‌ಕ್ರಾಸ್‌ನಿಂದ ಬೀಚ್ ಸ್ವಚ್ಛತಾ ಅಭಿಯಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಮಲ್ಪೆ ಕರಾವಳಿ ಕಾವಲು ಪೋಲಿಸ್ ಠಾಣೆ ಇವರ ಸಹಯೋಗದೊಂದಿಗೆ 6 ದಿನಗಳ ಪ್ಲಾಸ್ಟಿಕ್ ಮುಕ್ತ ಕಡಲ ಕಿನಾರೆ ಕಾರ್ಯಕ್ರಮದ ಅಂಗವಾಗಿ ಇಂದು ಮಲ್ಪೆ ಕೊಳ ಬೀಚ್‌ನಿಂದ ಸೀವಾಕ್‌ವರೆಗೆ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾರ್ಗದರ್ಶನದಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ಲಾಸ್ಟಿಕ್‌ನಂತಹ ವಸ್ತುಗಳ ಅವ್ಯಾಹತ ಬಳಕೆ ಮತ್ತು ಅವೈಜ್ಙಾನಿಕ ವಿಲೇವಾರಿ, ಪರಿಸರ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರ ನಿರ್ಲಕ್ಷ್ಯದಿಂದ ಪರಿಸರ ನಾಶವಾಗುತ್ತಿದೆ. ಇದನ್ನು ಸಂರಕ್ಷಿಸುವ ಸಲುವಾಗಿ ಕಡಲ ತೀರದ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಮುಕ್ತ ಬೀಚ್ ಎಂಬ ಧ್ಯೇಯ ವಾಕ್ಯದೊಂದಿಗೆ ಬೀಚ್‌ಗೆ ಆಗಮಿಸುವ ಸಾರ್ವಜನಿಕರು ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಸುರಕ್ಷಿತ ಸುಂದರ ಪರಿಸರವನ್ನು ನಿರ್ಮಿಸಲು ಸಹಕರಿಸುವಂತೆ ಮನವಿ ಮಾಡಿದರು.

ಸ್ವಚ್ಛತಾ ಕಾರ್ಯದಲ್ಲಿ ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾಧಿಕಾರಿ ಪ್ರಮೋದ್‌ಕುಮಾರ್, ಮಲ್ಪೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಂಕರ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಬಿ.ರತ್ನಾಕರ ಶೆಟ್ಟಿ, ರೆಡ್‌ಕ್ರಾಸ್ ಮಾಜಿ ಖಜಾಂಚಿ ಟಿ. ಚಂದ್ರಶೇಖರ್, ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಸಿಇಓ ಹರಿಕುಮಾರ್ ಹಾಗೂ ಡೆಪ್ಯೂಟಿ ಜನರಲ್ ಮೆನೇಜರ್ ಅಂಬಾಲವನನ್, ಕರಾವಳಿ ಕಾವಲು ಪೋಲಿಸ್ ಠಾಣೆಯ ಪೋಲಿಸ್ ಅಧಿಕಾರಿಗಳು, ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಸಿಬ್ಬಂದಿಗಳು, ರೆಡ್‌ಕ್ರಾಸ್, ಡಿಡಿಆರ್‌ಸಿ ಮತ್ತು ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್‌ನ ಸ್ವಯಂ ಸೇವಕರು, ಬ್ರಹ್ಮಾವರ ಎಸ್‌ಎಂಎಸ್ ಕಾಲೇಜು, ಪಿಪಿಸಿ ಕಾಲೇಜು, ಎಂಜಿಎಂ ಕಾಲೇಜು, ವೈಕುಂಠ ಬಾಳಿಗಾ ಲಾ ಕಾಲೇಜು, ತ್ರಿಶಾ ಕಾಲೇಜು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈಸೂರಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

share
Next Story
X